ಆ.14ರಂದು ಶ್ರೀಕೃಷ್ಣ ಜಯಂತಿ ಆಚರಣೆ
Update: 2017-08-11 22:28 IST
ಉಡುಪಿ, ಆ.11: ಜಿಲ್ಲಾಡಳಿತ, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕೃಷ್ಣ ಜಯಂತಿ ಆಚರಣೆ ಆ.14ರಂದು ಬೆಳಗ್ಗೆ 10:30ಕ್ಕೆ ಉಡುಪಿಯ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸುವರು ಎಂದು ಪ್ರಕಟಣೆಯಲ್ಲಿ ಇಲಾಖೆ ತಿಳಿಸಿದೆ.