ದೀನಬಂಧು ಶಾಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹುಟ್ಟುಹಬ್ಬ ಆಚರಣೆ

Update: 2017-08-12 11:18 GMT

ಚಾಮರಾಜನಗರ, ಆ.12- ಮುಖ್ಯಮಂತ್ರಿ ಸಿದ್ದರಾಮಯ್ಯ ರವರ 70ನೇ ಜನ್ಮ ದಿನಾಚರಣೆಯನ್ನು ಪಟ್ಟಣದ ದೀನಬಂಧು ಶಾಲೆಯಲ್ಲಿ ಮಕ್ಕಳಿಗೆ ಬೆಳಗ್ಗಿನ ಉಪಾಹಾರ ಹಾಗೂ ಕೇಕ್ ತಿನ್ನಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.

ಸಿದ್ದರಾಮಯ್ಯ ಅಭಿಮಾನಿ ಬಳಗದ ಚಾಮರಾಜನಗರ ಜಿಲ್ಲಾ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಜಿ.ಪಂ ಸದಸ್ಯ ಸದಾಶಿವಮೂರ್ತಿ ಮಕ್ಕಳಿಗೆ ಕೇಕ್ ತಿನ್ನಿಸುವ ಮೂಲಕ ಚಾಲನೆ ನೀಡಿ ಮಾತನಾಡಿ, ಸಿದ್ದರಾಮಯ್ಯ ರವರು ಈ ನಾಡು ಕಂಡ ಧೀಮಂತ ನಾಯಕರಾಗಿದ್ದು, ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಇಂದು ರಾಜ್ಯದಲ್ಲಿ ಉತ್ತಮ ಆಡಳಿತ ನೀಡುತ್ತಿದ್ದು, ಯಶಸ್ವಿಯಾಗಿ 5 ನೇ ವರ್ಷದತ್ತ ಮುನ್ನಗುತ್ತಿದೆ.
ಸಿದ್ದರಾಮಯ್ಯರವರು ಎಲ್ಲಾ ವರ್ಗದ ನಾಯಕರಾಗಿ ಸಮಾಜಿಕ ನ್ಯಾಯದಡಿ ಕೆಲಸ ಮಾಡುತ್ತಿದ್ದಾರೆ. ಅಂತಹ ನಾಯಕರ ಹುಟ್ಟುಹಬ್ಬವನ್ನು ದೀನಬಂಧು ಶಾಲೆಯ ಮಕ್ಕಳೊಂದಿಗೆ ಆಚರಿಸುತ್ತಿರುವುದು ಅರ್ಥಪೂರ್ಣ ವಾದುದೆಂದು ತಿಳಿಸಿದರು.

ಸಿದ್ದರಾಮಯ್ಯರವರು ಶಿಕ್ಷಣ ಕೇತ್ರಕ್ಕೆ ಹೆಚ್ಚಿನ ಒತ್ತು ನೀಡಿದ್ದು ಬಜೇಟ್‌ನಲ್ಲಿ ಹೆಚ್ಚು ಅನುದಾನ ನೀಡಿದ್ದಾರೆ. ಕ್ಷೀರಭಾಗ್ಯ ಯೋಜನೆಯನ್ನು ಹಮ್ಮಿಕೊಂಡು ಶಿಕ್ಷಣ ಕಾಂತ್ರಿಗೆ ಸಿದ್ದರಾಮಯ್ಯನವರು ಮುಂದಾಗಿದ್ದು, ವಿದ್ಯಾರ್ಥಿಗಳು ಮಹಾನ್ ನಾಯಕರ ಗುಣಗಳನ್ನು ಅಳವಡಿಸಿಕೊಂಡು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕೆಂದು ಸಲಹೆ ನೀಡಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿ, ಸಿ.ಎಂ ಸಿದ್ದರಾಮಯ್ಯ ಬಡವರ, ದೀನದಲಿತರ, ಹಿಂದುಳಿದವರ ಆಶಾಕಿರಣವಾಗಿದ್ದು ರಾಜ್ಯದ ಅಭಿವೃದ್ದಿಗೆ ಟೊಂಕ ಕಟ್ಟಿ ನಿಂತ್ತಿದ್ದಾರೆ. ಅನ್ನಭಾಗ್ಯ, ಕ್ಷೀರಭಾಗ್ಯ ಸೇರಿದಂತೆ ನೂರಾರು ಅಭಿವೃದ್ದಿ ಜಾರಿಗೊಳಿಸಿ ಉತ್ತಮ ಆಡಳಿತ ನೀಡುತ್ತಿದ್ದಾರೆ. ಜಿಲ್ಲೆಯ ಅಭಿವೃದ್ದಿಗೆ ಖುದ್ದು ಸಿಎಂ 7ನೇ ಬಾರಿ ಆಗಮಿಸಿ ವಿವಿಧ ಅಭಿವೃದ್ದಿ ಕಾಮಗಾರಿಗೆ ಚಾಲನೆ ನೀಡಿದ್ದಾರೆ. ಸದಾ ಜನತೆಯ ಕಲ್ಯಾಣಕ್ಕೆ ಮುಂದಿರುವ ಧೀಮಂತ ನಾಯಕ ಸಿದ್ದರಾಮಯ್ಯರವರಿಗೆ ದೇವರು ಆಯಸ್ಸು, ಆರೋಗ್ಯ ಕರುಣಿಸಲೆಂದು ಆಶಿಸಿದರು.

ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅಭಿಮಾನಿ ಬಳಗದ ಜಿಲ್ಲಾ ಘಟಕದ ಅಧ್ಯಕ್ಷ ಬೆಳ್ಳೇಗೌಡ, ಉಪಾಧ್ಯಕ್ಷ ಸೊತ್ತನಹುಂಡಿ ಸೋಮಣ್ಣ, ಕಾರ್ಯದರ್ಶಿ ಕುದೇರು ಲಿಂಗಣ್ಣ, ಕೆ.ಎಸ್. ಸುರೇಶ್, ಸಂ.ಕಾ. ನಾಗರಾಜು, ಎಪಿಎಂಸಿ ಅಧ್ಯಕ್ಷ ರವಿಕುಮಾರ್, ರಾಜ್ಯ ಕನಿಷ್ಠ ವೇತನಾ ಸಲಹಾ ಮಂಡಳಿ ಅಧ್ಯಕ್ಷ ಚಿನ್ನಸ್ವಾಮಿ, ಕ.ರಾ.ಮು.ವಿ.ಆ.ಮಂ.ನಿರ್ದೇಶಕ ಬಿ.ರಾಚಯ್ಯ, ಜಿ.ಪಂ ಮಾಜಿ ಸದಸ್ಯ ಪುಟ್ಟಬುದ್ದಿ, ಕಂಪೋಸ್ಟ್ ನಿಗಮದ ನಿರ್ದೇಶಕ ಮುರುಗನ್, ಕಾಗಲವಾಡಿ ಚಂದ್ರು, ಮಹದೇವು, ತಮ್ಮಡಹಳ್ಳಿ ಗೌಡ, ಶಾಲೆಯ ಮಕ್ಕಳು ಮತ್ತು ಶಿಕ್ಷಕರು ಹಾಜರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News