ಹಲ್ಲೆ ಪ್ರಕರಣ: ಆರೋಪಿಗಳಿಗೆ ಜಾಮೀನು

Update: 2017-08-12 14:44 GMT

ಪುತ್ತೂರು,ಆ.12: ಸುಳ್ಯದಲ್ಲಿ ನಡೆದ ಪ್ರಕರಣವೊಂದರಲ್ಲಿ ಇಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ 6 ಮಂದಿ ಆರೋಪಿಗಳಿಗೆ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರುಗೊಳಿಸಿದೆ.

ಸುಳ್ಯದ ಗಾಂಧೀನಗರದಲ್ಲಿ ಕಳೆದ ಜುಲೈ 28ರಂದು ನಡೆದ ಕಾಂಗ್ರೆಸ್-ಎಸ್‍ಡಿಪಿಐ ಕಾರ್ಯಕರ್ತರ ಘರ್ಷಣೆಯಲ್ಲಿ ಇಲ್ಲಿನ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದೀಕ್ ಮತ್ತು ಕಾಂಗ್ರೆಸ್ ಕಾರ್ಯಕರ್ತ ಬಶೀರ್ ಅವರಿಗೆ ಹಲ್ಲೆ ನಡೆಸಿ ಕೊಲೆ ಯತ್ನ ನಡೆಸಿರುವುದಾಗಿ ಆರೋಪಿಸಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ನಗರಸಭಾ ಸದಸ್ಯ ಉಮ್ಮರ್ ಸುಳ್ಯ ಸೇರಿದಂತೆ 8 ಮಂದಿ ಎಸ್‍ಡಿಪಿಐ ಕಾರ್ಯಕರ್ತರ ವಿರುದ್ದ ಕೇಸು ದಾಖಲಿಸಿಕೊಂಡಿದ್ದರು.

ಆರೋಪಿಗಳು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೆಸಿದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗಳಾದ ಉಮ್ಮರ್, ಕಲಾಂ, ಯೂಸುಫ್, ಮುಸ್ತಫಾ, ಲತೀಫ್ ಮತ್ತು ಕಬೀರ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರುಗೊಳಿಸಿದೆ.

ಆರೋಪಿಗಳ ಪರವಾಗಿ ನ್ಯಾಯವಾದಿಗಳಾದ ಅಶ್ರಫ್ ಕೆ. ಅಗ್ನಾಡಿ, ಅಬ್ದುಲ್ ಮಜೀದ್ ಖಾನ್, ಅಬ್ದುಲ್ ರಹಿಮಾನ್, ಶರೀಫ್ ಸುಳ್ಯ ವಾದಿಸಿದ್ದರು.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News