ವಿದ್ಯಾರ್ಥಿಯಿಂದ ಕನ್ನಡ ಧ್ವಜ ಹಾರಿಸಲು ವಿರೋಧ

Update: 2017-08-12 13:53 GMT

ಬೆಂಗಳೂರು, ಆ.12: ಕಾಲೇಜ್ ಕ್ಯಾಂಪಸ್‌ನಲ್ಲಿ ಕನ್ನಡ ಧ್ವಜ ಹಾರಿಸಬೇಡಿ ಎಂದು ಹೊರ ರಾಜ್ಯದ ವಿದ್ಯಾರ್ಥಿಯೊಬ್ಬ ಪ್ರಾಂಶುಪಾಲರಿಗೆ ಇಮೇಲ್ ಮೂಲಕ ಸಂದೇಶ ರವಾನಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ.

ಆರ್‌ವಿ ಕಾಲೇಜ್ ಆಫ್ ಎಂಜಿನಿಯರಿಂಗ್ ವಿದ್ಯಾರ್ಥಿಯಾದ ರಾಜಸ್ಥಾನ ಮೂಲದ ಮಧುಫ್ ಗುಪ್ತಾ ಇ-ಮೇಲ್ ಮೂಲಕ ಕಾಲೇಜಿನ ಪ್ರಾಂಶುಪಾಲರಿಗೆ ಪತ್ರ ಬರೆದು ಕಾಲೇಜು ಕ್ಯಾಂಪಸ್‌ನಲ್ಲಿ ಕನ್ನಡ ಧ್ವಜ ಹಾರಿಸಬೇಡಿ ಎಂದು ಮನವಿ ಮಾಡಿದ್ದಾನೆ.

ಮಧುಪ್ ಗುಪ್ತಾ ಬಿಇ ಕಂಪ್ಯೂಟರ್ ಸೈನ್ಸ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದು, ಕ್ಯಾಂಪಸ್‌ನಲ್ಲಿ ಕನ್ನಡ ಧ್ವಜ ಹಾರಿಸುವುದರಿಂದ ದೇಶದ ಏಕತೆ ಮತ್ತು ಸಮಗ್ರತೆಗೆ ಧಕ್ಕೆಯುಂಟಾಗುತ್ತದೆ ಎಂದು ಪತ್ರದಲ್ಲಿ ಬರೆದಿದ್ದಾನೆ. ವಿದ್ಯಾರ್ಥಿಯ ಕನ್ನಡ ವಿರೋಧಿ ಇ-ಮೇಲ್‌ಗೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಇದೀಗ ವಿದ್ಯಾರ್ಥಿ ಕ್ಷಮಾಪಣೆ ಕೇಳಿಕೊಂಡಿದ್ದಾನೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News