×
Ad

ಸರ್ವಕಾಲೇಜು ವಿದ್ಯಾರ್ಥಿ ಸಂಘದ ರಾಜ್ಯ ಕಾರ್ಯದರ್ಶಿಯಾಗಿ ನದೀಮ್ ಅಹ್ಮದ್ ಆಯ್ಕೆ

Update: 2017-08-12 22:07 IST

ಮಂಗಳೂರು, ಆ.12: 2017-18ನೇ ಸಾಲಿನ ಸರ್ವ ಕಾಲೇಜು ವಿದ್ಯಾರ್ಥಿ ಸಂಘ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿ ನದೀಮ್ ಅಹ್ಮದ್ ಆಯ್ಕೆಯಾಗಿದ್ದಾರೆ.

ಮಂಗಳೂರಿನ ಪುರಭವನದಲ್ಲಿ ನಡೆದ ಮತದಾನ ಪ್ರಕ್ರಿಯೆಯಲ್ಲಿ ನದೀಮ್ ಅಹ್ಮದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನದೀಮ್ ಅಹ್ಮದ್ ಈ ಮೊದಲು ಸರ್ವಕಾಲೇಜು ವಿದ್ಯಾರ್ಥಿ ಸಂಘದ 2016-17ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಈ ವೇಳೆ ನೇತ್ರಾವತಿ ನದಿ ತಿರುವು ಹೋರಾಟ, ಕರಾವಳಿಯ ಕ್ರೀಡೆಯಾಗಿರುವ ಕಂಬಳ ನಿಷೇಧದ ವಿರುದ್ಧದ ಹೋರಾಟ ಮುಂತಾದ ಕಾರ್ಯಗಳಲ್ಲಿ ತಮ್ಮನ್ನು ತಾವು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಇಂದು ಮಂಗಳೂರಿನ ಪುರಭವನದಲ್ಲಿ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆಯ ಮತದಾನ ಪ್ರಕ್ರಿಯೆಯಲ್ಲಿ ನದೀಮ್ ಅಹ್ಮದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರು ನಝೀರ್ ಅಹ್ಮದ್ ಬಾವಾ ಮತ್ತು ಮುಮ್ತಾಝ್ ಅಹ್ಮದ್ ದಂಪತಿಯ ಪುತ್ರ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News