×
Ad

ಸೌಹಾರ್ದತೆ ಮತ್ತು ಸಹಬಾಳ್ವೆ ಕುರಿತು ಜಾಗೃತಿಗಾಗಿ ಕಾಲ್ನಡಿಗೆ ಜಾಥ

Update: 2017-08-13 16:26 IST

ಚಿಕ್ಕಮಗಳೂರು,ಆ.13: ಸೌಹಾರ್ದತೆ ಮತ್ತು ಸಹಬಾಳ್ವೆ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮುಸ್ಲಿಂ ಸಮುದಾಯದವರು ನಗರದಲ್ಲಿ ಭಾನುವಾರ ಕಾಲ್ನಡಿಗೆ ಜಾಥಾ ನಡೆಸಿದರು.

ಜಮಿಯತ್ ಉಲೇಮಾ ಎ ಸಂಘಟನೆ ನೇತೃತ್ವದಲ್ಲಿ ತಾಲ್ಲೂಕು ಕಛೇರಿ ಆವರಣದಿಂದ ಶಾಂತಿ ನಡಿಗೆ ಮೆರವಣಿಗೆ ನಡೆಸಿದ ಸಮುದಾಯದ ಜನ ಆಜಾದ್ ಪಾರ್ಕ್ ವೃತ್ತದ ಬಳಿ ಸಮಾವೇಶಗೊಂಡು ಶಾಂತಿ ಸೌಹಾರ್ದತೆ ಮತ್ತು ಸಹಬಾಳ್ವೆ ಕುರಿತು ಘೋಷಣೆ ಕೂಗಿದರು.

ಈ ಸಂದರ್ಭದಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಜಮಾತೇ ಇಸ್ಲಾಮಿ ಸಂಸ್ಥೆಯ ಮಾಜಿ ಅಧ್ಯಕ್ಷ ರಿಜ್ವಾನ್ ಖಾಲಿದ್, ದೇಶದ ಒಳಿತಿಗಾಗಿ ಎಲ್ಲಾ ಧರ್ಮ ಮತ್ತು ಸಮುದಾಯದವರು ದ್ವೇಷ ಅಸೂಯೆ ತೊರೆದು ಪರಸ್ಪರ ಪ್ರೀತಿ ವಿಶ್ವಾಸದಿಂದ ಬದುಕಬೇಕು. ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ ಮುಸ್ಲಿಂ ಸಮುದಾಯದವರನ್ನು ಅನುಮಾನ ಮತ್ತು ದ್ವೇಷದಿಂದ ಕಾಣುವ ಪ್ರವೃತ್ತಿ ಹೆಚ್ಚಾಗುತ್ತಿದೆ, ಇದರಿಂದ ಯಾವುದೇ ಒಂದು ಸಮುದಾಯ ನಾಶವಾಗುವುದಿಲ್ಲ. ಆದರೆ ದೇಶಕ್ಕೆ ಹಾನಿಯಾಗುತ್ತದೆ ಎಂದು ಎಚ್ಚರಿಸಿದರು.ರಾಷ್ಟ್ರದ ಏಕತೆಗಾಗಿ ಎಲ್ಲಾ ಧರ್ಮಿಯರೂ ನಾವೆಲ್ಲಾ ಭಾರತೀಯರು ಎಂದು ಹೇಳಬೇಕಾಗಿದೆ. ಪ್ರೀತಿ, ನಂಬಿಕೆ ಮತ್ತು ವಿಶ್ವಾಸದ ಮೇಲೆ ರಾಷ್ಟ್ರವನ್ನು ಕಟ್ಟಬೇಕಾಗಿದೆ ಎಂದರು.

ಉಪ್ಪಳ್ಳಿ ಯೂಸೂಫ್ ಮಸೀದಿಯ ಧರ್ಮಗುರು ಮುಫ್ತಿ ತೌಫೀಕ್ ಅಹಮದ್ ಮಾತನಾಡಿ, ಕೇಂದ್ರ ಸರ್ಕಾರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಕಾರ್ಯಕ್ರಮದಡಿ ಎಲ್ಲ ಧರ್ಮಿಯರನ್ನು ಒಟ್ಟಿಗೆ ಕರೆದೊಯ್ಯುವ ಅಗತ್ಯವಿದೆ ಎಂದು ತಿಳಿಸಿದರು.

ಜಮಿಯತ್ ಉಲೇಮಾ ಎ ಸಂಘಟನೆಯ ರಾಜ್ಯ ಸಮಿತಿ ಸದಸ್ಯ ನಸ್ರುಲ್ಲಾ ಷರೀಫ್, ಜಿಲ್ಲಾಧ್ಯಕ್ಷ ಅಬ್ದುಲ್ ರವೂಫ್, ಪ್ರಧಾನ ಕಾರ್ಯದರ್ಶಿ ಅಸ್ಗರ್ ಅಲಿ, ಕಾರ್ಯದರ್ಶಿ ಜಹೀರ್ ಅಹಮದ್, ಮಹಮದ್ ಸಾದಿಕ್, ಜಿಪಂ ಮಾಜಿ ಅಧ್ಯಕ್ಷ ಕೆ.ಮಹಮದ್, ಪಂಚಾಯತ್ ರಾಜ್ ಸಂಘಟನೆಯ ರಾಜ್ಯ ಸಂಚಾಲಕ ಬಿ.ಎಂ.ಸಂದೀಫ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News