ಮೂಡುಶೆಡ್ಡೆ: ಆ.14ರಂದು ಹಕ್ಕು ಪತ್ರ ವಿತರಣೆ
Update: 2017-08-13 17:13 IST
ಮಂಗಳೂರು, ಆ.13: ಮೂಡುಶೆಡ್ಡೆ ವ್ಯಾಪ್ತಿಯಲ್ಲಿ 94ಸಿ ಅಡಿ ಮನೆ ಅಡಿ ಸ್ಥಳ ಸಕ್ರಮೀಕರಣಕ್ಕೆ ಅರ್ಜಿ ಸಲ್ಲಿಸಿರುವ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಆ.14 ಸೋಮವಾರ ಮಧ್ಯಾಹ್ನ 12 ಗಂಟೆಗೆ ಮೂಡುಶೆಡ್ಡೆ ಗ್ರಾಮ ಪಂಚಾಯತ್ ಆವರಣದಲ್ಲಿ ನಡೆಯಲಿದೆ.
ಇದೇ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಮತುತಿ ಪಂಗಡದ ಫಲಾನುಭವಿಗಳಿಗೆ ಗ್ಯಾಸ್ ಸೌಲಭ್ಯಗಳನ್ನು ನೀಡಲಾಗುವುದು. ಶಾಸಕ ಕೆ. ಅಭಯಚಂದ್ರ ಜೈನ್ ಅಧ್ಯಕ್ಷತೆ ವಹಿಸಲಿದ್ದಾರೆ.