7 ದಿನಗಳಲ್ಲಿ ವರದಿ ಸಲ್ಲಿಸಲು ಉನ್ನತಾಧಿಕಾರ ಸಮಿತಿಗೆ ನಿರ್ದೇಶ

Update: 2017-08-13 16:15 GMT

ಲಕ್ನೋ, ಆ. 13: ಗೋರಖ್‌ಪುರದ ಬಿಆರ್‌ಡಿ ವೈದ್ಯಕೀಯ ಕಾಲೇಜಿನಲ್ಲಿ ಸಂಭವಿಸಿದ ಮಕ್ಕಳ ಸಾವಿನ ಕುರಿತು ತನಿಖೆ ನಡೆಸಲು ರಾಜ್ಯದ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ರೂಪಿಸಲಾದ ಉನ್ನತಾಧಿಕಾರ ಸಮಿತಿಗೆ 7 ದಿನಗಳಲ್ಲಿ ವರದಿ ಸಲ್ಲಿಸುವಂತೆ ನಿರ್ದೇಶ ನೀಡಲಾಗಿದೆ.

ಆಮ್ಲಜನಕ ಪೂರೈಕೆ ಸೇರಿದಂತೆ ದುರಂತದ ಎಲ್ಲ ಆಯಾಮಗಳ ಬಗ್ಗೆ ಸಮಿತಿ ತನಿಖೆ ನಡೆಸಲಿದೆ. ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ. ರಾಜೀವ್ ಮಿಶ್ರಾನನ್ನು ಈಗಾಗಲೇ ಅಮಾನತುಗೊಳಿಸಲಾಗಿದೆ.

ಉನ್ನತಾಧಿಕಾರ ಸಮಿತಿ ಹಾಗೂ ಜಿಲ್ಲಾ ದಂಡಾಧಿಕಾರಿ ನೇತೃತ್ವದ ನ್ಯಾಯಾಂಗ ತನಿಖೆಯ ವರದಿ ಸ್ವೀಕರಿಸಿದ ಬಳಿಕ ದುರಂತಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News