ಮೇಲಿನ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದ್ದರೆ ವಿಚಾರಣಾ ನ್ಯಾಯಾಲಯ ಜಾಮೀನು ನೀಡಬಾರದು

Update: 2017-08-13 15:22 GMT

ಹೊಸದಿಲ್ಲಿ,ಆ.13: ಮೇಲಿನ ನ್ಯಾಯಾಲಯಗಳಲ್ಲಿ ಪ್ರಕರಣಗಳು ಬಾಕಿಯಿದ್ದು ನಿರೀಕ್ಷಣಾ ಜಾಮೀನು ನೀಡಲಾಗಿದ್ದರೆ ಅಂತಹ ಪ್ರಕರಣಗಳಲ್ಲಿ ನಿಯಮಿತ ಜಾಮೀನನ್ನು ನೀಡುವ ಪದ್ಧತಿಯನ್ನು ತಕ್ಷಣವೇ ನಿಲ್ಲಿಸುವಂತೆ ಸರ್ವೋಚ್ಚ ನ್ಯಾಯಾಲಯವು ವಿಚಾರಣಾ ನ್ಯಾಯಾಲಯಗಳಿಗೆ ನಿರ್ದೇಶ ನೀಡಿದೆ.

ಮೇಲಿನ ನ್ಯಾಯಾಲಯವು ಆರೋಪಿಗೆ ಈಗಾಗಲೇ ನಿರೀಕ್ಷಣಾ ಜಾಮೀನು ನೀಡಿದ್ದಿದ್ದರೆ ಮತ್ತು ಪ್ರಕರಣವು ಅಲ್ಲಿ ಬಾಕಿಯಿದ್ದರೆ ಆರೋಪಿಯು ವಿಚಾರಣಾ ನ್ಯಾಯಾಲಯಕ್ಕೆ ಶರಣಾಗಿ ಅಲ್ಲಿ ನಿಯಮಿತ ಜಾಮೀನನ್ನು ಕೋರುವಂತಿಲ್ಲ ಎಂದು ಅದು ಸ್ಪಷ್ಟಪಡಿಸಿದೆ.

 ಜಾರ್ಖಂಡ್‌ನ ವಿಚಾರಣಾ ನ್ಯಾಯಾಲಯವೊಂದು ಈಗಾಗಲೇ ಸವೋಚ್ಚ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದ ಆರೋಪಿಗೆ ನಿಯಮಿತ ಜಾಮೀನು ಮಂಜೂರು ಮಾಡಿರುವುದನ್ನು ಗಮನಿಸಿ ನ್ಯಾಯಮೂರ್ತಿಗಳಾದ ರಂಜನ್ ಗೊಗೊಯ್ ಮತ್ತು ನವೀನ್ ಸಿನ್ಹಾ ಅವರ ಪೀಠವು ಈ ನಿರ್ದೇಶವನ್ನು ಹೊರಡಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News