ಚುಂಚನಗಿರಿ ಶ್ರೀ ಮುಂದೆ ಕಾಲ ಮೇಲೆ ಕಾಲು ಹಾಕಿ ಕುಳಿತ ಅಮಿತ್ ಶಾ: ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ

Update: 2017-08-14 05:56 GMT

ಬೆಂಗಳೂರು, ಆ. 14: ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಠಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭೇಟಿ ನೀಡಿದ್ದ ವೇಳೆ ನಿರ್ಮಲಾನಂದನಾಥ ಸ್ವಾಮೀಜಿ ಅವರ ಎದುರು ಶಾ ತನ್ನ ಕಾಲ ಮೇಲೆ ಕಾಲು ಹಾಕಿಕೊಂಡು ಕುಳಿತು ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಶಾ ಅವರ ವರ್ತನೆಗೆ ಫೇಸ್‌ಬುಕ್, ವಾಟ್ಸ್‌ಆ್ಯಪ್‌ಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ‘ನಿರ್ಮಲಾನಂದನಾಥ ಸ್ವಾಮೀಜಿ ಶೂದ್ರ ಸಮುದಾಯಕ್ಕೆ ಸೇರಿದ ಕಾರಣಕ್ಕೆ ಶಾ ಈ ರೀತಿ ವರ್ತಿಸಿದ್ದಾರೆ. ಮೇಲ್ಜಾತಿಯ ಸ್ವಾಮೀಜಿ ಅಥವಾ ಪೇಜಾವರ ಶ್ರೀಗಳು ಆಗಿದ್ದರೆ ಶಾ ಈ ರೀತಿ ವರ್ತಿಸುತ್ತಿದ್ದರೇ?’ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

ಕನ್ನಡ ಸಂಘಟನೆಗಳು, ಒಕ್ಕಲಿಗರ ಬ್ರಿಗೇಡ್  ಸೇರಿದಂತೆ ಹಲವು ಫೇಸ್‌ಬುಕ್ ಹಾಗೂ ವಾಟ್ಸ್‌ಆ್ಯಪ್‌ ಗ್ರೂಪ್‌ಗಳಲ್ಲಿ ಅಮಿತ್‌ ಶಾ  ಸ್ವಾಮೀಜಿ ಎದುರು ಕಾಲಮೇಲೆ ಕಾಲು ಹಾಕಿಕುಳಿತಿರುವ ಚಿತ್ರಗಳು ಹರಿದಾಡುತ್ತಿವೆ. ಗ್ರೂಪ್‌ಗಳಲ್ಲಿ ಅಮಿತ್‌ ಶಾ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News