ಪರಿಷತ್ ಸ್ಥಾನಕ್ಕೆ ಉಪ ಚುನಾವಣೆ

Update: 2017-08-14 14:35 GMT

ಬೆಂಗಳೂರು, ಆ. 14: ವಿಧಾನ ಪರಿಷತ್ ಸದಸ್ಯೆ ವಿಮಲಾ ಗೌಡ ಅವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಆ ಸ್ಥಾನ ತುಂಬಲು ಆ.31ಕ್ಕೆ ಉಪ ಚುನಾವಣೆ ನಿಗದಿಪಡಿಸಿದ್ದು, ಅಧಿಸೂಚನೆ ಹೊರಡಿಸಲಾಗಿದೆ.

ನಾಮಪತ್ರ ಸಲ್ಲಿಸಲು ಆ.21 ಕೊನೆಯ ದಿನ. ಆ.22ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಆ.24 ಕೊನೆಯ ದಿನ. ಆ.31ರ ಬೆಳಗ್ಗೆ 9ರಿಂದ ಸಂಜೆ 4 ಗಂಟೆಯ ವರೆಗೆ ಮತದಾನ ನಡೆಯಲಿದೆ. ಮತ ಎಣಿಕೆ ಆ.31ರ ಸಂಜೆ 5ಗಂಟೆಯಿಂದ ಆರಂಭವಾಗಲಿದೆ.
ವಿಧಾನಸಭೆ ಕಾರ್ಯದರ್ಶಿ ಎಸ್.ಮೂರ್ತಿ ಚುನಾವಣಾಧಿಕಾರಿ ಹಾಗೂ ಉಪ ಕಾರ್ಯದರ್ಶಿ ಎಂ.ಎಸ್.ಕುಮಾರಸ್ವಾಮಿ ಸಹಾಯಕ ಚುನಾವಣಾಧಿಕಾರಿ ಆಗಿರುತ್ತಾರೆಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News