ವಿದ್ಯಾರ್ಥಿಗಳು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಲಹೆ

Update: 2017-08-14 15:28 GMT

ಮಂಡ್ಯ, ಆ.14: ವಿದ್ಯಾರ್ಥಿಗಳು ಪಠ್ಯವಿಷಯಗಳ ಕಲಿಕೆಯ ಜತೆಗೆ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಜೀವನ ಮೌಲ್ಯಗಳಾದ ಶಿಸ್ತು, ಸಮಯಪ್ರಜ್ಞೆಯನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ತಾಲೂಕಿನ ದುದ್ದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಮಧುಮಾಲತಿ ಸಲಹೆ ಮಾಡಿದ್ದಾರೆ.

ದುದ್ದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ 2017-18ನೆ ಸಾಲಿನ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ     ಮಾತನಾಡಿದ ಅವರು, ವಿನಯದ ಜತೆಗೆ ತಮ್ಮಲ್ಲಿರುವ ಶಕ್ತಿಸಾಮರ್ಥ್ಯವನ್ನು ಸನ್ಮಾರ್ಗದಲ್ಲಿ ಸುಪಯೋಗ ಮಾಡಿಕೊಂಡು ಸರ್ವತೋಮುಖ ಬೆಳವಣಿಗೆಗೆ ಪೂರಕ ವಾತಾವರಣ ಸೃಷ್ಟಿಸಿಕೊಳ್ಳಬೇಕೆಂದರು.

ಉಪಪ್ರಾಂಶುಪಾಲ ಪುಟ್ಟಸ್ವಾಮಿ ಮಾತನಾಡಿ, ತಮ್ಮಲ್ಲಿರುವ ಪ್ರತಿಭೆ ಪ್ರದರ್ಶನಕ್ಕೆ ಸೂಕ್ತವಾಗಿರುವ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಉದಾತ್ತ ವಿಚಾರವಂತರಾಗಿ ಭವಿಷ್ಯ ರೂಪಿಸಿಕೊಳ್ಳಬೇಕು .ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ಪ್ರಾಂಶುಪಾಲ ತೂಬಿನಕೆರೆ ಲಿಂಗರಾಜು ಅಧ್ಯಕ್ಷತೆ ವಹಿಸಿದ್ದರು.  ಹಿರಿಯ ಉಪನ್ಯಾಸಕಿ ಕುಸುಮ, ಉಪನ್ಯಾಸಕರಾದ ಕೃಷ್ಣ, ಲತಾರಾಣಿ, ಗಣೇಶ್‌ಕುಮಾರ್, ರಾಘವೇಂದ್ರ, ತಂಗರಾಣಿ, ಗುಲ್ತಾಜ್, ಪುಟ್ಟಲಿಂಗೇಗೌಡ, 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News