ಗ್ರೆನೇಡ್ ದಾಳಿ: ನಾಲ್ವರು ಭದ್ರತಾ ಸಿಬ್ಬಂದಿಗೆ ಗಾಯ
Update: 2017-08-14 21:33 IST
ಶ್ರೀನಗರ, ಆ.14: ಕೇಂದ್ರ ಕಾಶ್ಮೀರದ ಬುದ್‌ಗಾಂವ್ ಜಿಲ್ಲೆಯಲ್ಲಿ ಭಯೋತ್ಪಾದಕರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಭದ್ರತಾ ದಳದ ನಾಲ್ವರು ಸಿಬ್ಬಂದಿಗಳು ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇಲ್ಲಿಂದ 20 ಕಿ.ಮೀ. ದೂರದ ಬಟ್‌ಪೊರಾ ಎಂಬಲ್ಲಿ ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ನಿರತರಾಗಿದ್ದ ಸಿಆರ್‌ಪಿಎಫ್ ಮತ್ತು ಪೊಲೀಸ್ ತಂಡದ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿದಾಗ ಮೂವರು ಸಿಆರ್‌ಪಿಎಫ್ ಸಿಬ್ಬಂದಿ ಹಾಗೂ ಓರ್ವ ಪೊಲೀಸ್ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.