ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ
Update: 2017-08-14 21:56 IST
ಮಂಗಳೂರು, ಆ.14: ಗೃಹರಕ್ಷಕದಳ ಮತ್ತು ಪೌರರಕ್ಷಣಾ ಇಲಾಖೆಯಲ್ಲಿ ವಿಶಿಷ್ಟ ಸೇವೆಯನ್ನು ಗುರುತಿಸಿ ದ.ಕ. ಜಿಲ್ಲಾ ಗೃಹರಕ್ಷಕದಳದ ಡೆಪ್ಯುಟಿ ಕಮಾಂಡೆಂಟ್ ರಮೇಶ್ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ ಲಭಿಸಿದೆ.
ಇವರು 2008ರಲ್ಲಿ ರಾಷ್ಟ್ರಪತಿಗಳ ಶ್ಲಾಘನೀಯ ಪದಕ, 2008ರಲ್ಲಿ ಮುಖ್ಯಮಂತ್ರಿಗಳ ಚಿನ್ನದ ಪದಕವನ್ನು ಪಡೆದಿರುತ್ತಾರೆ. ಇವರ ಸೇವೆಯನ್ನು ಗುರುತಿಸಿ 2014ರಲ್ಲಿ ಮಂಗಳೂರಿನ ಯುವವಾಹಿನಿಯು ‘ಯುವ ವಾಹಿನಿ ಸಾಧನ ಶ್ರೇಷ್ಠ ಪ್ರಶಸ್ತಿ’ ನೀಡಿ ಗೌರವಿಸಿದೆ.
1989ರಲ್ಲಿ ಇಲಾಖೆಗೆ ಸೇರಿ 28 ವರ್ಷಗಳ ಸೇವಾ ಅವಧಿಯಲ್ಲಿ ಮಂಗಳೂರು, ಉಡುಪಿ, ಮಡಿಕೇರಿ, ಚಿಕ್ಕಮಗಳೂರು, ಬೆಂಗಳೂರು ಜಿಲ್ಲೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಪ್ರಸ್ತುತ ದ.ಕ. ಜಿಲ್ಲೆಯಲ್ಲಿ ಡೆಪ್ಯುಟಿ ಕಮಾಂಡೆಂಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಹೆಚ್ಚುವರಿಯಾಗಿ ಉಡುಪಿ ಜಿಲ್ಲೆಯಲ್ಲೂ ಕರ್ತವ್ಯ ನಿರ್ವಹಿಸುತ್ತಿದ್ದಾರೆ.