ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣ: ಮೂವರ ಬಂಧನ?

Update: 2017-08-15 11:57 GMT

ಮಂಗಳೂರು, ಆ.15: ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ. 

ಜುಲೈ 4ರಂದು ರಾತ್ರಿ ಬೈಕ್‍ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಸಜಿಪ ಮುನ್ನೂರು ಗ್ರಾಮದ ಕಂದೂರು ಮಡಿವಾಳ ಪಡ್ಪು ನಿವಾಸಿ, ಬಿ.ಸಿ.ರೋಡ್ ಉದಯ ಲಾಂಡ್ರಿ ಮಾಲಕ ಶರತ್ ಮಡಿವಾಳರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಶರತ್‍ರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಜುಲೈ 7ರಂದು ರಾತ್ರಿ ಮೃತಪಟ್ಟಿದ್ದರು. ಆನಂತರ ಶರತ್ ಶವಯಾತ್ರೆಯ ಸಂದರ್ಭ ನಡೆದ ಕಲ್ಲು ತೂರಾಟಕ್ಕೆ ಸಂಬಂಧಿಸಿ ಹಲವರನ್ನು ಬಂಧಿಸಲಾಗಿತ್ತು. 

ಶರತ್ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಮೂವರನ್ನು ಬಂಧಿಸಲಾಗಿದೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News