ಸ್ವಾತಂತ್ರ್ಯೋತ್ಸವ ಆಚರಿಸಲು ಶಾಲೆಗೆ ತೆರಳಿದ್ದ ಬಾಲಕಿಯ ಮೇಲೆ ಅತ್ಯಾಚಾರ

Update: 2017-08-15 13:17 GMT

ಚಂಡೀಗಢ, ಆ.15: ಸ್ವಾತಂತ್ರ್ಯ ದಿನಾಚರಿಸಲು ಶಾಲೆಗೆ ತೆರಳುತ್ತಿದ್ದ 12ರ ಹರೆಯದ ಬಾಲಕಿಯೊಬ್ಬಳನ್ನು ಅಪಹರಿಸಿ ಅತ್ಯಾಚಾರಗೈದ ಘಟನೆ ಚಂಡೀಗಢದಲ್ಲಿ ನಡೆದಿದೆ.

ತನ್ನ ಶಾಲೆಗೆ ಬೇಗ ತಲುಪುವ ದಾರಿಯ ಮೂಲಕ ಬಾಲಕಿ ತೆರಳಿದ್ದು, ಈ ಸಂದರ್ಭ ಆಕೆಯನ್ನು ಅಡ್ಡಗಟ್ಟಿದ ದುಷ್ಕರ್ಮಿಯೋರ್ವ ಅತ್ಯಾಚಾರಗೈದಿದ್ದಾನೆ, ಇನ್ನೊಂದು ಮೂಲಗಳ ಪ್ರಕಾರ ಬಾಲಕಿ ಶಾಲೆಯಿಂದ ಮರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.

ಈ ಪರಿಸರದ ಸಿಸಿ ಕ್ಯಾಮರಾಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದು, ಆರೋಪಿಗಾಗಿ ತೀವ್ರ ಹುಡುಕಾಟದಲ್ಲಿದ್ದಾರೆ. ಬೆಳಗ್ಗೆ 8:15 ಸುಮಾರಿಗೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ರಸ್ತೆಯಲ್ಲಿ ಟ್ರಾಫಿಕ್ ಇಲ್ಲದೆ ಇದ್ದುದರಿಂದ ಹಾಗೂ ಸ್ವಾತಂತ್ರ್ಯೋತ್ಸವದಿಂದಾಗಿ ಬಾಲಕಿ ಶಾಲೆಗೆ ತೆರಳುತ್ತಿದ್ದ ಪಾರ್ಕ್ ನಲ್ಲಿ ಹೆಚ್ಚಿನ ಜನರು ಇರಲಿಲ್ಲ ಎನ್ನಲಾಗಿದೆ.

ಬಾಲಕಿಯನ್ನು ವೈದ್ಯಕೀಯ ತಪಾಸಣೆಗೊಳಪಡಿಸಿದ್ದು, ಅತ್ಯಾಚಾರ ನಡೆದಿರುವುದು ದೃಢವಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News