ಕೆಎಸ್ಸಾರ್ಟಿಸಿ ಕೇಂದ್ರ ಕಚೇರಿಯಲ್ಲಿ ಸ್ವಾತಂತ್ರೋತ್ಸವ

Update: 2017-08-15 13:57 GMT

ಬೆಂಗಳೂರು, ಆ. 15: ಎಪ್ಪತ್ತೊಂದನೆ ಸ್ವಾತಂತ್ರೋತ್ಸವದ ಹಿನ್ನೆಲೆಯಲ್ಲಿ ಇಲ್ಲಿನ ಶಾಂತಿನಗರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ)ಕೇಂದ್ರ ಕಚೇರಿಯಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಸ್.ಆರ್.ಉಮಾಶಂಕರ್ ಧ್ವಜಾರೋಹಣ ನೆರವೇರಿಸಿದರು.

ಆ ಬಳಿಕ ಸಂಸ್ಥೆ ಸಿಬ್ಬಂದಿ ಮತ್ತವರ ಅವರ ಮಕ್ಕಳಿಗಾಗಿ ಸ್ವಾತಂತ್ರೋತ್ಸವದ ಅಂಗವಾಗಿ ಆಯೋಜಿಸಿದ್ದ ವಿವಿಧ ಕ್ರೀಡೆ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಉಮಾಶಂಕರ್ ಬಹುಮಾನ ವಿತರಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ನಿಗಮದ ಉಪಾಧ್ಯಕ್ಷ ಬಸವರಾಜ ಬುಳ್ಳಾ, ನಿರ್ದೇಶಕ ಎಸ್. ರವಿ, ಮಂಡಳಿ ಸದಸ್ಯ ಕೃಷ್ಣಮೂರ್ತಿ ಮತ್ತು ನಿಗಮದ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News