ಬಿಜೆಪಿಯಿಂದ ದೇಶದ ಐಕ್ಯತೆ ಸಮಗ್ರತೆಗೆ ಧಕ್ಕೆ: ನಾರಾಯಣಸ್ವಾಮಿ

Update: 2017-08-15 14:25 GMT

ಬೆಂಗಳೂರು, ಆ. 15: ದೇಶದ ಐಕ್ಯತೆ, ಸಮಗ್ರತೆಯನ್ನು ಗಾಳಿಗೆ ತೂರಿ, ದೇಶವನ್ನು ಬೇರೆ ದಿಕ್ಕಿಗೆ ಕೊಂಡೊಯ್ಯುವ ಪ್ರಯತ್ನ ನಡೆಯುತ್ತಿದ್ದು, ಈ ಬಗ್ಗೆ ಜನ ಸಾಮಾನ್ಯರು ಎಚ್ಚರಿಕೆ ವಹಿಸಬೇಕು ಎಂದು ಜೆಡಿಎಸ್ ಕಾರ್ಯಾಧ್ಯಕ್ಷ ನಾರಾಯಣ ಸ್ವಾಮಿ ಸಲಹೆ ಮಾಡಿದ್ದಾರೆ.

ಮಂಗಳವಾರ ಇಲ್ಲಿನ ಜೆಡಿಎಸ್ ಕಚೇರಿಯಲ್ಲಿ ಏರ್ಪಡಿಸಿದ್ದ ಸ್ವಾತಂತ್ರೋತ್ಸ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ದೇಶದಲ್ಲಿ ಐಕ್ಯತೆ ಮತ್ತು ಸಮಗ್ರತೆಗೆ ಧಕ್ಕೆ ಒದಗಿದ್ದು, ಪ್ರಜಾಪ್ರಭುತ್ವ ನಾಶವಾಗುವ ಹಂತಕ್ಕೆ ತಲುಪಿದೆ. ಪ್ರಜ್ಞಾವಂತ ನಾಗರಿಕರು ಎಚ್ಚರಿಕೆ ವಹಿಸುವ ಮೂಲಕ ದೇಶವನ್ನು ಕಾಪಾಡಲು ಮುಂದಾಗಬೇಕು ಎಂದರು.

ದೇಶದಲ್ಲಿ ಆರ್ಥಿಕ ಚೇತರಿಕೆ ಕಾಣಿಸುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುವ ಮುನ್ನ ಎಲ್ಲ ಯುವಕರಿಗೆ ಉದ್ಯೋಗ ಕೊಡಿಸುವ ಭರವಸೆ ನೀಡಿತ್ತು. ಅದು ಇಂದು ಹುಸಿಯಾಗಿದೆ ಎಂದು ನಾರಾಯಣಸ್ವಾಮಿ ಇದೇ ವೇಳೆ ಟೀಕಿಸಿದರು.

ಪಕ್ಷ ಅಧಿಕಾರಕ್ಕೆ ತನ್ನಿ: 2018ರ ಚುನಾವಣೆ ಸಮೀಪಿಸುತ್ತಿದ್ದು, ಪಕ್ಷದ ಎಲ್ಲ ಕಾರ್ಯಕರ್ತರು ಹಾಗೂ ಮುಖಂಡರು ಒಗ್ಗಟ್ಟಿನಿಂದ ಶ್ರಮಿಸುವ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತರಬೇಕು. ಪಕ್ಷ ಹಮ್ಮಿಕೊಂಡಿರುವ ಮನೆ ಮನೆಗೆ ಕುಮಾರಣ್ಣ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಸಲಹೆ ಮಾಡಿದರು.
 ಈ ವೇಳೆ ಮೇಲ್ಮನೆ ಸದಸ್ಯರಾದ ರವೆುೀಶ್ ಬಾಬು, ಶರವಣ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಆರ್.ಪ್ರಕಾಶ್, ಮಾಜಿ ಸಚಿವ ಬಂಡೆಪ್ಪಕಾಶ್ಯಂಪುರ್ ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News