ಬಿಇ ವಿದ್ಯಾರ್ಥಿ ಆತ್ಮಹತ್ಯೆ

Update: 2017-08-15 14:29 GMT

ಬೆಂಗಳೂರು, ಆ.15: ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಕಾರಣದಿಂದ ನೊಂದು ಬಿಇ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಇಲ್ಲಿನ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ಅಮೃತಹಳ್ಳಿಯ ಕಾಫಿಬೋರ್ಡ್ ನಿವಾಸಿ ಸಂಭ್ರಮ್(22) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ ಎಂದು ಪೊಲೀಸರು ಗುರುತಿಸಿದ್ದಾರೆ.

ಕಾರ್ಕಳದ ಕಾಲೇಜೊಂದರಲ್ಲಿ ಬಿಇ ವ್ಯಾಸಂಗ ಮಾಡುತ್ತಿದ್ದ ಸಂಭ್ರಮ್ ಪರೀಕ್ಷೆ ಮುಗಿಸಿ ಮನೆಗೆ ಬಂದಿದ್ದನು. ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದರಿಂದ ನೊಂದು ಮನೆಯಲ್ಲಿ ಸೋಮವಾರ ರಾತ್ರಿ 9 ಗಂಟೆ ಸುಮಾರಿಗೆ ಫ್ಯಾನ್‌ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.

ಪ್ರಕರಣ ಸಂಬಂಧ ಅಮೃತಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಶವವನ್ನು ಅಂಬೇಡ್ಕರ್ ವೈದ್ಯಕೀಯ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೊಳಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News