ಹೂಡೆ ಸಾಲಿಹಾತ್ ಶಿಕ್ಷಣ ಸಂಸ್ಥೆಯಿಂದ ಸ್ವಾತಂತ್ಯೋತ್ಸವ
Update: 2017-08-15 20:20 IST
ಉಡುಪಿ, ಆ.15: ತೋನ್ಸೆ ಹೂಡೆಯ ಸಾಲಿಹಾತ್ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಕ್ಬರ್ ಅಲಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ನಮಗೆ ದೊರಕಿದ ಸ್ವಾತಂತ್ರ್ಯ ಬಂಡವಾಳಶಾಹಿಗಳ ಪಾಲಾಗುತ್ತಿದ್ದು, ದೇಶದ ಕಟ್ಟಕಡೆಯ ಪ್ರಜೆಗೆ ಸಿಗ ಬೇಕಾ ಗಿ್ದ ನ್ಯಾಯ ಮರೀಚಿಕೆಯಾಗಿದೆ ಎಂದರು.
ಈ ಸಂದರ್ಭದಲ್ಲಿ 2016-17ನೆ ಶೈಕ್ಷಣಿಕ ಸಾಲಿನ ಎಸೆಸೆಲ್ಸಿ, ಪಿಯುಸಿ, ಪದವಿ ಹಾಗೂ ಬೋರ್ಡ್ ಆಫ್ ಇಸ್ಲಾಮಿಕ ಪಬ್ಲಿಕ್ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪ್ರತಿಭಾ ಪುರಸ್ಕಾರ ನೀಡಿ ಗೌರವಿಸ ಲಾಯಿತು. ಅಧ್ಯಕ್ಷತೆಯನ್ನು ಕಾರ್ಯದರ್ಶಿ ಜಿ.ಇಮ್ತಿಯಾಝ್ ವಹಿಸಿದ್ದರು. ಆಡಳಿತಾಧಿಕಾರಿ ಅಸ್ಲಾಂ ಹೈಕಾಡಿ, ಹಿರಿಯ ಟ್ರಸ್ಟಿ ಮೌಲಾನಾ ಆದಮ್ ಸಾಹೇಬ್, ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರು , ಮುಖ್ಯ ಶಿಕ್ಷಕಿಯರು ಮೊದಲಾದವರು ಉಪಸ್ಥಿತರಿದ್ದರು.