ಹಿರಿಯರ ತ್ಯಾಗ ಬಲಿದಾನ ಸ್ಮರಿಸೋಣ:ದಿನಕರ ಬಾಬು
Update: 2017-08-15 20:42 IST
ಉಡುಪಿ, ಆ.15: ನಮ್ಮ ಹಿರಿಯರ ತ್ಯಾಗ ಬಲಿದಾನದಿಂದ ನಮಗೆ ದೊರಕಿದ ಸ್ವಾತಂತ್ರವನ್ನು ಪ್ರತಿಯೊಬ್ಬರೂ ನೆನೆಯಬೇಕು. ಈ ಹೋರಾಟಗಾರರ ಶ್ರಮ ವ್ಯರ್ಥವಾಗಬಾರದು. ದೇಶದ ಪ್ರಕೃತಿ ಹಾಗೂ ಸಂಪನ್ಮೂಲಗಳನ್ನು ರಕ್ಷಿಸೋಣ. ಜಿಲ್ಲೆಯಲ್ಲಿ ಮಳೆ ನೀರು ಇಂಗಿಸುವ ಕುರಿತು ಜಾಗೃತರಾಗೋಣ ಎಂದು ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ಹೇಳಿದ್ದಾರೆ.
ಮಣಿಪಾಲದಲ್ಲಿರುವ ಜಿಪಂ ಕಚೇರಿ ಮುಂಭಾಗದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡುತಿದ್ದರು. ದೇಶದ ಸೈನಿಕರಿಗೆ ಆತ್ಮಸ್ಥೆರ್ಯ ನೀಡುವ ಮೂಲಕ ಅವರನ್ನು ಬೆಂಬಲಿಸಬೇಕು.ನೆರೆಯ ಚೀನಾ ದೇಶದ ಮೇಲೆ ಆಕ್ರಮಣ ಮಾಡುವ ಸಾಧ್ಯತೆಯಿದೆ. ಚೀನಿ ಉತ್ಪನ್ನಗಳನ್ನು ಬಹಿಷ್ಕರಿಸುವ ಮೂಲಕ ದೇಶಕ್ಕೆ ಬೆಂಬಲ ನೀಡಬೇಕು ಎಂದು ದಿನಕರ ಬಾಬು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಪಂ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಕಾಪಶಿ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.