×
Ad

ಹೈಕಮಾಂಡ್ ಸೂಚಿಸಿದರೆ, ಗೃಹಖಾತೆ ನಿರ್ವಹಿಸಲು ಸಿದ್ಧನಿದ್ದೇನೆ: ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ

Update: 2017-08-15 21:23 IST

ದಾವಣಗೆರೆ, ಆ. 15: ಹೈಕಮಾಂಡ್ ಸೂಚಿಸಿದರೆ, ಗೃಹಖಾತೆ ನಿರ್ವಹಿಸಲು ಸಿದ್ಧನಿದ್ದೇನೆ ಹೊರತು ಗೃಹ ಖಾತೆಯ ಆಕಾಂಕ್ಷಿ ನಾನಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ಯುವಜನ ಸೇವೆ ಮತ್ತು ಕ್ರೀಡಾ ಸಚಿವನಾಗಿದ್ದೆ. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಲ್ಲಿ ತೋಟಗಾರಿಕೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವನಾಗಿದ್ದೇನೆ. ಹೈಕಮಾಂಡ್ ಸೂಚಿಸಿದರೆ ಗೃಹಖಾತೆ ವಹಿಸಿಕೊಳ್ಳಲು ಸಿದ್ಧ. ಕಾಂಗ್ರೆಸ್ ಹೈಕಮಾಂಡ್ ನೀಡುವ ಯಾವುದೇ ಹೊಣೆಗಾರಿಕೆ ನಿರ್ವಹಿಸಲು ನಾನು ಸಿದ್ಧನಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಲ್ಲಿ ಎಲ್ಲಾ ಸಚಿವರೂ ಒಟ್ಟಿಗೆ, ಒಗ್ಗಟ್ಟಿನಿಂದಲೇ ಇದ್ದೇವೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News