ಶಿರ್ವ ಬಲ್ಲಾಡಿ ಸರಕಾರಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ
Update: 2017-08-15 21:49 IST
ಶಿರ್ವ, ಆ.15: ಬಲ್ಲಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಉದ್ಯಮಿ ಎನ್.ನಿತ್ಯಾನಂದ ಶೆಟ್ಟಿ ಧ್ವಜಾರೋಹಣಗೈದರು.
ಎಸ್‌ಡಿಎಂಸಿ ಅಧ್ಯಕ್ಷೆ ದೀಪಾ, ಜಿಪಂ ಸದಸ್ಯ ವಿಲ್ಸನ್ ರೊಡ್ರಿಗಸ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಉಮೇಶ ಆಚಾರ್ಯ, ಶಾಲಾ ಮುಖ್ಯ ಶಿಕ್ಷಕ ಶಿವಣ್ಣ ಕೆ. ಮೊದಲಾದವರು ಉಪಸ್ಥಿತರಿದ್ದರು.