×
Ad

ಜಿಲ್ಲಾ ಪತ್ರಕರ್ತರ ಭವನದಲ್ಲಿ 71ನೇ ಸ್ವಾತಂತ್ರ್ಯ ದಿನಾಚರಣೆ

Update: 2017-08-15 22:41 IST

ಹಾಸನ, ಆ. 15: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಪ್ರತಿವರ್ಷದಂತೆ ಈ ವರ್ಷವು ಕೂಡ 71ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ದ್ವಜಾರೋಹಣವನ್ನು ಹಿರಿಯ ಪತ್ರಕರ್ತ ಶೇಷಾದ್ರಿ, ಎಸ್ಪಿ ರಾಹುಲ್ ಕುಮಾರ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರವಿನಾಕಲಗೂಡು, ವಾರ್ತಾಧಿಕಾರಿ ವಿನೋದ್ ಚಂದ್ರ ಇತರರು  ನೆರವೇರಿಸಿದರು.

     ನಂತರ ಗಾಂಧಿ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ ನಮನ ಸಲ್ಲಿಸಿದರು. ಇದೆ ವೇಳೆ ಸಹಿ ಹಂಚಿ ಸಂಭ್ರಮಿಸಲಾಯಿತು. ದ್ವಜಾರೋಹಣ ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷೆ ಲೀಲಾವತಿ, ಉಪಾಧ್ಯಕ್ಷ ಅತೀಖುರ್ ರೆಹಮನ್, ಕಾರ್ಯದರ್ಶಿ ಹರೀಶ್ ಕೋಟೆ, ಖಜಾಂಚಿ ಜಿ. ಪ್ರಕಾಶ್, ಭಾರತ ಸೇವಾದಳದ ಜಿಲ್ಲಾ ಸಂಘಟಕರಾದ ರಾಣಿ ಇತರರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News