ರಸ್ತೆ ಒತ್ತುವರಿ ತೆರವಿಗೆ ಆಗ್ರಹಿಸಿ ಕಚೇರಿಗೆ ಮುತ್ತಿಗೆ

Update: 2017-08-15 18:20 GMT

ಮದ್ದೂರು, ಆ.15: ಗ್ರಾಮದ ರಸ್ತೆ ಒತ್ತುವರಿ ತೆರವುಗೊಳಿಸುವಲ್ಲಿ ತಹಶೀಲ್ದಾರ್ ನಿರ್ಲಕ್ಷ್ಯ ಧೋರಣೆ ಅನುಸರಿಸಿದ್ದಾರೆ ಎಂದು ಆರೋಪಿಸಿ  ತಾಲೂಕಿನ ಬೋರಾಪುರ ಗ್ರಾಮಸ್ಥರು ಮಂಗಳವಾರ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ಗ್ರಾಪಂ ಸದಸ್ಯ ಪ್ರಕಾಶ್ ನೇತೃತ್ವದಲ್ಲಿ ಆಗಮಿಸಿದ ಗ್ರಾಮಸ್ಥರು, ಮೊದಲು ಲೋಕೋಪಯೋಗಿ ಇಲಾಖೆಗೆ ಮುತ್ತಿಗೆ ಹಾಕಿ ಸಹಾಯಕ ಕಾರ್ಯಪಾಲಕ ಅಭಿಯಂತರ ಮಧುಗೌಡ ಅವರನ್ನು ಒತ್ತುವರಿ ತೆರವು ಮಾಡದ ವಿಚಾರದಲ್ಲಿ ತರಾಟೆಗೆ ತೆಗೆದುಕೊಂಡರು. 
ಬಳಿಕ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು, ಸ್ಥಳದಲ್ಲಿದ್ದ ತಹಶೀಲ್ದಾರ್ ಎಸ್.ಹರ್ಷ, ಸರ್ವೆ ಅಧಿಕಾರಿ ಹನುಮೇಗೌಡ, ತಿಪ್ಪೇಸ್ವಾಮಿ ಅವರೊಂದಿಗೆ ಮಾತಿನ ಚಕಮಕಿ ನಡೆಸಿದರು. 

ತೆರವುಗೊಳಿಸುವುದಾಗಿ ತಹಸೀಲ್ದಾರ್ ಹರ್ಷ ಭರವಸೆ ನೀಡಿದರು. ರಸ್ತೆ ಒತ್ತುವರಿ ತೆರವುಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ಈಗಲಾದರೂ ಕ್ರಮವಹಿಸದಿದ್ದರೆ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಅವರು ಎಚ್ಚರಿಸಿದರು. ಹಿಂಪಡೆದರು. 

ರವಿ, ಸಿದ್ದರಾಮು, ಪ್ರಕಾಶ್, ಸುರೇಶ್, ದೇವರಾಜು, ದಿನೇಶ್, ಇತರ ಮುಖಂಡರು ಭಾಗವಹಿಸಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News