ಬೆಂಗಳೂರಿನಲ್ಲಿ ಮಹಾನೆರೆ..!
Update: 2017-08-15 23:51 IST
ಬೆಂಗಳೂರುನಲ್ಲಿ ಬೆಳ್ಳಂಬೆಳಗ್ಗೆ ಗುಡುಗು, ಸಿಡಿಲಿನ ಅಬ್ಬರದೊಂದಿಗೆ ಸುರಿದ ಧಾರಾಕಾರ ಮಳೆ, ಎಪ್ಪತ್ತೊಂದನೆ ಸ್ವಾತಂತ್ರೋತ್ಸವ ಸಂಭ್ರಮಕ್ಕೆ ಅಡ್ಡಿಯನ್ನುಂಟು ಮಾಡಿತು. ಮಾತ್ರವಲ್ಲ, ತಗ್ಗುಪ್ರದೇಶಗಳಿಗೆ ನೀರು ನುಗ್ಗಿದ ಪರಿಣಾಮ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಯಿತು. ನಗರದ ಬಹುತೇಕ ರಸ್ತೆಗಳು ಜಲಾವೃತವಾಗಿದ್ದು, ಕಾರು, ಬೈಕ್‌ಗಳು, ಬಿಎಂಟಿಸಿ ಬಸ್ಸುಗಳು ಸೇರಿದಂತೆ ಹಲವು ವಾಹನಗಳು ನೀರಲ್ಲಿ ಮುಳುಗಿವೆ. ಅಲ್ಲದೆ, ಮಳೆ ನೀರಿನೊಂದಿಗೆ ಚರಂಡಿಯ ಕೊಚ್ಚೆ ನೀರು ಮನೆ, ಕಚೇರಿಗಳಿಗೆ ನುಗ್ಗಿದ ಪರಿಣಾಮ ಜನರು ಅಕ್ಷರಶಃ ಸಂಕಷ್ಟಕ್ಕೆ ಸಿಲುಕಬೇಕಾಯಿತು.