11 ಗಂಟೆಗಳ ಕಾಲ ಕೊಳವೆಬಾವಿಯೊಳಗಿದ್ದ ಬಾಲಕನ ರಕ್ಷಣೆ

Update: 2017-08-16 05:05 GMT

ಗುಂಟೂರು, ಆ.16: ತೆರೆದ ಕೊಳವೆಬಾವಿಯೊಂದಕ್ಕೆ ಬಿದ್ದಿದ್ದ 2 ವರ್ಷದ ಮಗುವನ್ನು 11 ಗಂಟೆಗಳ ನಂತರ ರಕ್ಷಿಸಲಾಗಿದೆ. ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ವಿನುಕೊಂಡದಲ್ಲಿ ಈ ಘಟನೆ ನಡೆದಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ, ಪೊಲೀಸ್ ಹಾಗೂ ಜಿಲ್ಲಾಡಳಿತ ಜಂಟಿಯಾಗಿ ರಕ್ಷಣಾ ಕಾರ್ಯ ಕೈಗೊಂಡಿತ್ತು.

ಬಾಲಕ ಚಂದ್ರಶೇಖರ್ ಮನೆಯ ಸಮೀಪ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಕೊಳವೆಬಾವಿಯೊಳಕ್ಕೆ ಬಿದ್ದಿದ್ದ. 15 ಅಡಿ ಆಳದಲ್ಲಿ ಬಾಲಕ ಸಿಲುಕಿಕೊಂಡಿದ್ದ. ತಕ್ಷಣವೇ ಜಿಲ್ಲಾಡಳಿತಕ್ಕೆ ಈ ಬಗ್ಗೆ ಮಾಹಿತಿ ನೀಡಲಾಗಿದ್ದು,. ಸತತ 11 ಗಂಟೆಗಳ ಕಾರ್ಯಾಚರಣೆ ನಡೆಸಿ ಬಾಲಕನನ್ನು ರಕ್ಷಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News