ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ರಾಜಕೀಯ ನಾಯಕರುಗಳ ಪ್ರತಿಕೃತಿಗಳಿಗೆ ಬೆಂಕಿ: ಆರೋಪ

Update: 2017-08-16 09:03 GMT

ಶಿಡ್ಲಘಟ್ಟ, ಆ. 16: ಕ್ವಿಟ್ ಇಂಡಿಯಾ ಚಳುವಳಿಯ 75 ನೇ ವರ್ಷದ ಆಚರಣೆ ಮಾಡುವ ನೆಪದಲ್ಲಿ ಮಾಜಿ ಸಚಿವ ವಿ.ಮುನಿಯಪ್ಪ ಅವರ ನೇತೃತ್ವದಲ್ಲಿ ನಡೆದ ರ್ಯಾಲಿಯ ವೇಳೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ಮತ್ತು ಪ್ರಧಾನಿ ನರೇಂದ್ರಮೋದಿ ಅವರ ಪ್ರತಿಕೃತಿಗಳನ್ನು ದಹಿಸುವ ಮೂಲಕ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ತಾಲ್ಲೂಕು ಬಿಜೆಪಿ ಅಧ್ಯಕ್ಷ ಬಿ.ಸಿ.ನಂದೀಶ್ ಆರೋಪಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಜನಪರವಾದ ಕಾರ್ಯಕ್ರಮಗಳಿಂದಾಗಿ ರಾಷ್ಟ್ರದಲ್ಲಿ ತೀವ್ರ ಹಿನ್ನಡೆ ಅನುಭವಿಸುತ್ತಿರುವ ಕಾಂಗ್ರೆಸ್ ಪಕ್ಷ, ಹತಾಶೆಯಿಂದ ಇಂತಹ ಕೃತ್ಯಗಳಿಗೆ ಕೈಹಾಕಿದೆ. ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳಲು ಸಾಧ್ಯವಾಗದಿರುವಷ್ಟರ ಮಟ್ಟಿಗೆ ಕಾಂಗ್ರೆಸ್ ಪಕ್ಷ ಅಳಿವಿನಂಚಿಗೆ ಹೋಗುತ್ತಿದೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜನಧನ ಯೋಜನೆ, ಉಜ್ವಲ ಯೋಜನೆಯಡಿ ಬಡಕುಟುಂಬಗಳಿಗೆ ಉಚಿತವಾಗಿ ಗ್ಯಾಸ್ ವಿತರಣೆ, ಜಿ.ಎಸ್.ಟಿ, ಯುವಕರ ಸಬಲೀಕರಣಕ್ಕೆ ಮುದ್ರಾ ಯೋಜನೆ, ರೈತರಿಗೆ ಅನುಕೂಲ ಕಲ್ಪಿಸಲು ಫಸಲ್ ಭೀಮಾಯೋಜನೆ, ಗರ್ಭೀಣಿ ಮಹಿಳೆಯರಿಗೆ ಅನುಕೂಲ ಕಲ್ಪಿಸಲು ಆರೋಗ್ಯ ಕವಚಾ ಯೋಜನೆ, ಗಂಗಾನದಿ ಶುದ್ಧೀಕರಣ, ಸ್ವಚ್ಚ ಭಾರತ ಯೋಜನೆ, ಮೇಕ್ ಇನ್ ಇಂಡಿಯಾ, ಸೇರಿದಂತೆ ಅನೇಕ ಯೋಜನೆಗಳ ಬಗ್ಗೆ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆಗೆ ಒಳಗಾಗುತ್ತಿದ್ದರೂ ಕಾಂಗ್ರೆಸ್‌ನವರು ಈ ರೀತಿಯಾಗಿ ಅಪಪ್ರಚಾರ ಮಾಡುವುದು ಹಾಸ್ಯಸ್ಪದವಾಗಿ. ಶಾಸಕರು, ತಮ್ಮ ಪಕ್ಷದಲ್ಲಿನ ಆಂತರಿಕ ಭಿನ್ನಮತ ಸರಿಪಡಿಸಿಕೊಳ್ಳಲು ಹೆಣಗಾಡುತ್ತಿದ್ದು, ಅಭಿವೃದ್ಧಿಯನ್ನು ಮರೆತಿದ್ದಾರೆ ಎಂದರು.

ನಗರಸಭಾ ಸದಸ್ಯ ರಾಘವೇಂದ್ರ ಮಾತನಾಡಿ, ಮಾಜಿ ಶಾಸಕರು, ಕ್ಷೇತ್ರದ ಬಗ್ಗೆ ಕಾಳಜಿವಹಿಸುವುದರ ಬದಲಿಗೆ ಕೇವಲ ಚುನಾವಣೆಯಲ್ಲಿ ಗೆಲ್ಲುವುದನ್ನೆ ಅಜೆಂಡಾ ಮಾಡಿಕೊಂಡಿದ್ದಾರೆ. ಇವರು ಬಿಜೆಪಿ ನಾಯಕರುಗಳ ಬಗ್ಗೆ ಅಪಪ್ರಚಾರ ಮಾಡುವುದು ಸರಿಯಲ್ಲ ಎಂದರು.

ಸಚಿವ ಡಿ.ಕೆ.ಶಿವಕುಮಾರ್, ರಮೇಶ್ ಜಾರಕಿಹೋಳಿ, ಲಕ್ಷ್ಮೀಹೆಬ್ಬಾಳ್‌ಕರ್ ಅವರ ಮನೆಗಳ ಮೇಲೆ ಆದಾಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಸಚಿವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಬಿಜೆಪಿ ಮುಖಂಡರು ಒತ್ತಾಯಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಆರ್.ಸುರೇಂದ್ರಗೌಡ, ಶ್ರೀರಾಮರೆಡ್ಡಿ, ತಾಲ್ಲೂಕು ಪ್ರಧಾನಕಾರ್ಯದರ್ಶಿ ಬಾಸ್ಕರ್‌ರೆಡ್ಡಿ, ರಾಜ್ಯ ಸಮಿತಿ ಸದಸ್ಯ ದಾಮೋದರ್, ಜಿಲ್ಲಾ ಕಾರ್ಯದರ್ಶಿ ಸುಜಾತಮ್ಮ, ರಾಮಕೃಷ್ಣಪ್ಪ, ಎಸ್.ಸಿ.ಮೋರ್ಚಾ ಅಧ್ಯಕ್ಷ ಮುನಿರಾಜು, ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News