ಬೈಕ್ ಕಳವು ಪ್ರಕರಣ: ಓರ್ವನ ಬಂಧನ

Update: 2017-08-16 12:52 GMT

ಬೆಂಗಳೂರು, ಆ. 16: ಬೈಕ್‌ಗಳನ್ನು ಕಳವು ಮಾಡುತ್ತಿದ್ದ ಪ್ರಕರಣ ಸಂಬಂಧ ವ್ಯಕ್ತಿಯೊಬ್ಬನನ್ನು ಇಲ್ಲಿನ ಬಾಗಲಗುಂಟೆ ಠಾಣೆ ಪೊಲೀಸರು ಬಂಧಿಸಿ 10 ಲಕ್ಷ ರೂ.ಮೌಲ್ಯದ 20 ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ನಗರದ ಕಾಳಾಸ್ತ್ರಿ ನಗರದ ರಾಮಸ್ವಾಮಿ ಯಾನೆ ರಂಗ(28) ಬಂಧಿತ ಆರೋಪಿ ಎಂದು ಪೊಲೀಸರು ಗುರುತಿಸಿದ್ದಾರೆ.

ಆರೋಪಿಯು ಮದ್ಯ ಸೇವನೆಗಾಗಿ ಮನೆಗಳ ಮುಂಭಾಗ ನಿಲ್ಲಿಸಿದ್ದ ಬೈಕ್‌ಗಳನ್ನು ನಕಲಿ ಕೀ ಬಳಸಿ ಕಳವು ಮಾಡುತ್ತಿದ್ದ. ಈತನೊಂದಿಗೆ ಕೃತ್ಯದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದು, ಆತನಿಗಾಗಿ ತೀವ್ರ ಶೋಧ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ರಾಮಸ್ವಾಮಿಯು ಕಳವು ಮಾಡುತ್ತಿದ್ದ ಬೈಕ್‌ಗಳನ್ನು ಕೇವಲ 500 ರಿಂದ 1000ರೂ. ವರೆಗೆ ಮಾರಾಟ ಮಾಡಿರುವುದು ಪತ್ತೆಯಾಗಿದೆ. ಈ ಹಿಂದೆ ಕೂಡ ಆರೋಪಿ ಬೈಕ್ ಕಳವು ಪ್ರಕರಣಗಳಲ್ಲಿ ಭಾಗಿಯಾಗಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News