ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಮೆಚ್ಚುಗೆ

Update: 2017-08-16 17:14 GMT

ಬೆಂಗಳೂರು, ಆ. 16: ಸ್ವಾತಂತ್ರ ದಿನಾಚರಣೆ ಅಂಗವಾಗಿ ‘ಅನಾರೋಗ್ಯದಿಂದ ಸ್ವಾತಂತ್ರ, ಆರೋಗ್ಯದೆಡೆಗೆ, ಉತ್ತಮ ಆರೋಗ್ಯದ ಆಚರಣೆ’ ಘೋಷಣೆಯಡಿ ಆರೋಗ್ಯ ಇಲಾಖೆ ರಾಜ್ಯದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ಶಿಬಿರದಲ್ಲಿ ಒಟ್ಟು 7277 ಮಂದಿ ತಪಾಸಣೆ ಮಾಡಿಸಿಕೊಂಡಿದ್ದಾರೆ.

ಶಿಬಿರದಲ್ಲಿ ಅಸಾಂಕ್ರಾಮಿಕ ರೋಗಗಳ ತಪಾಸಣೆ, ವಿವಿಧ ಕಾಯಿಲೆಗಳು ತಪಾಸಣೆ ಮಾಡಲಾಗಿದ್ದು, ರೋಗಗಳಿಗೆ ಚಿಕಿತ್ಸೆ ಹಾಗೂ ಸೂಕ್ತ ಸಲಹೆಗಳನ್ನು ನೀಡಲಾಗಿದೆ. ಬೆಂಗಳೂರು, ವೆೆುಸೂರು, ಬೆಳಗಾವಿ, ಕಲಬುರಗಿ ಸೇರಿದಂತೆ ನಾಲ್ಕು ವಿಭಾಗಗಳಲ್ಲಿಯೂ ಶಿಬಿರ ನಡೆಸಲಾಯಿತು.

ಸ್ವಾತಂತ್ರ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದ ಜಿಲ್ಲಾ ಉಸ್ತುವಾರಿ ಸಚಿವರು, ಅಧಿಕಾರಿಗಳು ಸೇರಿದಂತೆ ಗಣ್ಯರು ಆರೋಗ್ಯ ಇಲಾಖೆ ಉಚಿತ ತಪಾಸಣಾ ಶಿಬಿರದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಹೆಚ್ಚಿನ ಜನತೆ ಈ ಶಿಬಿರದ ಪ್ರಯೋಜನ ಪಡೆದುಕೊಂಡಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News