ಕರ್ಣಾಟಕ ಬ್ಯಾಂಕ್ ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಲಭ್ಯ

Update: 2017-08-16 18:49 GMT

ಮಂಗಳೂರು, ಆ.16: ಖಾಸಗಿ ಕ್ಷೇತ್ರದ ಪ್ರತಿಷ್ಠಿತ ಬ್ಯಾಂಕ್ ಎನಿಸಿರುವ ಕರ್ಣಾಟಕ ಬ್ಯಾಂಕ್ ಇದೀಗ ಸಾಮಾಜಿಕ ಮಾಧ್ಯಮದ ಮೂಲಕವೂ ಗ್ರಾಹಕರನ್ನು ತಲುಪುವ ಉಪಕ್ರಮ ಆರಂಭಿಸಿದೆ. ಪ್ರಮುಖ ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ಟ್ವಿಟರ್, ಇನ್‌ಸ್ಟಗ್ರಾಮ್ ಹಾಗೂ ಯೂಟ್ಯೂಬ್‌ಗಳಲ್ಲಿ ಕರ್ಣಾಟಕ ಬ್ಯಾಂಕ್‌ನ ಅಧಿಕೃತ ಪುಟಗಳನ್ನು ಆರಂಭಿಸಲಾಗಿದೆ.

@karnatakabankಮಂಗಳೂರಿನಲ್ಲಿರುವ ಬ್ಯಾಂಕ್‌ನ ಪ್ರಧಾನ ಕಚೇರಿಯಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕ್‌ನ ಆಡಳಿತ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಾಬಲೇಶ್ವರ ಎಂ.ಎಸ್. ಅಧಿಕೃತ ಸಾಮಾಜಿಕ ಮಾಧ್ಯಮ ಪುಟ ಗೆ ಚಾಲನೆ ನೀಡಿದರು.

ಸಾಮಾಜಿಕ ಮಾಧ್ಯಮಗಳು ಪರಸ್ಪರ ಸಂವಹನ ನಡೆಸುವ ಪ್ರಕ್ರಿಯೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದೆ. ಯುವಜನಾಂಗವು ಸಾಮಾಜಿಕ ಮಾಧ್ಯಮ ಜಾಲತಾಣದ ವ್ಯವಹಾರದ ಬಗ್ಗೆ ಹೆಚ್ಚಿನ ಅರಿವು ಹೊಂದಿದ್ದಾರೆ. ಈ ನಿಟ್ಟಿನಲ್ಲಿ ಸಾಮಾಜಿಕ ಮಾಧ್ಯಮದ ಜನಪ್ರಿಯತೆಯ ಅನುಕೂಲ ಪಡೆದುಕೊಳ್ಳಲು ಹಾಗೂ ಬ್ಯಾಂಕಿನ ಚಟುವಟಿಕೆ ಹಾಗೂ ಬ್ಯಾಂಕಿಂಗ್ ಉತ್ಪನ್ನ ಮತ್ತು ಸೇವೆಯ ಕುರಿತು ಗ್ರಾಹಕರಿಗೆ ಮಾಹಿತಿ ನೀಡಲು ಈ ಮಾಧ್ಯಮಕ್ಕೆ ಪ್ರವೇಶಿಸುತ್ತಿದ್ದೇವೆ. ಈಗ ಗ್ರಾಹಕರು ಸಾಮಾಜಿಕ ಮಾಧ್ಯಮಗಳ ಮೂಲಕ ಬ್ಯಾಂಕಿನ ಜೊತೆ ತ್ವರಿತ ಸಂಪರ್ಕ ಸಾಧಿಸಲು ಸಾಧ್ಯವಾಗುತ್ತದೆ ಎಂದವರು ನುಡಿದರು.

ಬ್ಯಾಂಕಿನ ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ಗ್ರಾಹಕರು ಈ ಸಂದರ್ಭ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News