ರಾಜೀವ್ ಗಾಂಧಿ ಹತ್ಯೆ ಪ್ರಕರಣ: ಬಳಸಲಾದ ಐಇಡಿ ಯಥಾಸ್ಥಿತಿ ವರದಿ ಕೋರಿದ ಸುಪ್ರೀಂ

Update: 2017-08-17 16:58 GMT

ಹೊಸದಿಲ್ಲಿ, ಆ. 17: ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಬಳಸಲಾದ ಸುಧಾರಿತ ಸ್ಫೋಟಕ ಸಾಧನ (ಐಇಡಿ)ದ ಕುರಿತು ನಡೆಯುತ್ತಿರುವ ತನಿಖೆಯ ಯಥಾಸ್ಥಿತಿ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸಿಬಿಐಗೆ ನಿರ್ದೇಶಿಸಿದೆ.

ನ್ಯಾಯಮೂರ್ತಿ ರಂಜನ್ ಗೊಗಯ್ ನೇತೃತ್ವದ ಪೀಠ ಈ ವಿಚಾರಣೆ ನಡೆಸಿದೆ.

 ಪೇರರಿವಾಲನ್, ಮುರುಗನ್, ಶಂತಾನ್, ರೋಬರ್ಟ್ ಪಾಯಸ್, ನಳಿನಿ, ಜಯಕುಮಾರ್ ಹಾಗೂ ರವಿಚಂದ್ರನ್ ಈ ಪ್ರಕರಣದ 7 ಮಂದಿ ಅಪರಾಧಿಗಳು. ನಳಿನಿ ಶ್ರೀಹರನ್‌ಳನ್ನು ತಮಿಳುನಾಡಿನ ವೆಲ್ಲೂರಿನಲ್ಲಿರುವ ಮಹಿಳಾ ವಿಶೇಷ ಕಾರಾಗೃಹದಲ್ಲಿ ಇರಿಸಲಾಗಿದೆ. ನಳಿನಿಗೆ ಆರಂಭದಲ್ಲಿ ಮರಣ ದಂಡನೆ ವಿಧಿಸಲಾಗಿತ್ತು. ಅನಂತರ ರಾಜ್ಯ ಸರಕಾರ ಆಕೆಯ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಿತ್ತು.

ಆಕೆಯ ಪತಿ ಮುರುಗನ್ (ಶ್ರೀಹರನ್) ಸೇರಿದಂತೆ ನಾಲ್ವರಿಗೆ ಮರಣದಂಡನೆ ಹಾಗೂ ಇತರ ಮೂವರಿಗೆ ಜೀವಾವಧಿ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ವಿಧಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News