×
Ad

ದೇವಾಡಿಗರ ಸಂಘದಿಂದ ಪ್ರತಿಭಾ ಪುರಸ್ಕಾರ

Update: 2017-08-17 22:50 IST

ಉಡುಪಿ, ಆ.17: ದೇವಾಡಿಗರ ಸೇವಾ ಸಂಘ ಉಡುಪಿ ಇದರ ವತಿಯಿಂದ ವಾರ್ಷಿಕ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವು ಆ.20ರಂದು ಬೆಳಗ್ಗೆ 9 ಗಂಟೆಗೆ ಚಿಟ್ಪಾಡಿಯಲ್ಲಿ ರುವ ದೇವಾಡಿಗರ ಸಭಾಭವನದಲ್ಲಿ ನಡೆಯಲಿದೆ.

ಇಂದಿಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಸೀತಾರಾಮ ದೇವಾಡಿಗ ಈ ವಿಷಯ ತಿಳಿಸಿದರು. ಕಾರ್ಯಕ್ರಮವನ್ನು ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ಎಂ.ವೀರಪ್ಪ ಮೊಯ್ಲಿ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಮುಖ್ಯ ಅತಿಥಿಯಾಗಿ ಭಾಗವ ಹಿಸುವರು. ಸೀತಾರಾಮ ದೇವಾಡಿಗ ಅದ್ಯಕ್ಷತೆ ವಹಿಸುವರು.

ಸಮಾರಂಭದಲ್ಲಿ ಎಸೆಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ.85ಕ್ಕಿಂತ ಅಧಿಕ ಅಂಕಗಳನ್ನು ಪಡೆದ ದೇವಾಡಿಗ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಅಲ್ಲದೇ ಶೇ.55ಕ್ಕಿಂತ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಗುವುದು ಎಂದರು.

ವಿದ್ಯಾರ್ಥಿ ವೇತನಕ್ಕಾಗಿ ರಾಜ್ಯಾದ್ಯಂತದಿಂದ ದೇವಾಡಿಗ ಸಮಾಜದ ವಿದ್ಯಾರ್ಥಿಗಳಿಂದ 600ಕ್ಕೂ ಅಧಿಕ ಅರ್ಜಿಗಳು ಬಂದಿದ್ದು, ಒಟ್ಟು ಎಂಟು ಲಕ್ಷ ರೂ.ಗಳಿಗೂ ಅಧಿಕ ಮೊತ್ತವನ್ನು ವಿತರಿಸಲಾಗುವುದು. ಅಲ್ಲದೇ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಏಳು ಮಂದಿ ಸಾಧಕರನ್ನು ಸನ್ಮಾನಿಸ ಲಾಗುವುದು ಎಂದು ಸೀತಾರಾಮ ದೇವಾಡಿಗ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷ ನಾರಾಯಣ ಸೇರಿಗಾರ, ಪ್ರಧಾನ ಕಾರ್ಯದರ್ಶಿ ಹರೀಶ ಸೇರಿಗಾರ, ಮಾಜಿ ಅಧ್ಯಕ್ಷ ಗಣೇಶ ದೇವಾಡಿಗ, ರತ್ನಾಕರ ಜಿ.ಎಸ್. ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News