ಶಿವರಾಮಕಾರಂತ ಬಡಾವಣೆ ಡಿನೋಟಿಫೈ: ಬಿಎಸ್‌ವೈ ವಿರುದ್ಧ ಎಸಿಬಿಯಿಂದ ಎಫ್‌ಐಆರ್

Update: 2017-08-17 17:44 GMT

ಬೆಂಗಳೂರು, ಆ.17: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಶಿವರಾಮಕಾರಂತ ಬಡಾವಣೆ ಡಿನೋಟಿಫಿಕೇಷನ್ ಆರೋಪಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಬಿಎಸ್‌ವೈ ವಿರುದ್ಧ ಎಫ್‌ಐಆರ್ ದಾಖಲಿಸಿದೆ.

  ಬಿ.ಎಸ್.ಯಡಿಯೂರಪ್ಪ ಅವರು ಸಿಎಂ ಆಗಿದ್ದ ಅವಧಿಯಲ್ಲಿ ಶಿವರಾಮಕಾರಂತ ಬಡಾವಣೆ ಡಿನೋಟಿಫೈ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಎಸಿಬಿ, ಬಿಎಸ್‌ವೈ ವಿರುದ್ಧ ಎಫ್‌ಐಆರ್ ದಾಖಲಿಸಿದೆ.

  ಎಸಿಬಿ ಬಿಎಸ್‌ವೈ ವಿರುದ್ಧ ಡಿನೋಟಿಫಿಕೇಷನ್ ಆರೋಪದಡಿ ಎಫ್‌ಐಆರ್ ದಾಖಲಿಸಿದ್ದು, ಸದ್ಯದಲ್ಲಿಯೇ ತನಿಖೆ ನಡೆಸುವ ಸಾಧ್ಯತೆ ಇದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News