ಜಯಲಲಿತಾ ಸಾವಿನ ಪ್ರಕರಣ ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

Update: 2017-08-17 18:01 GMT

ಚೆನ್ನೈ, ಆ.17: ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಸಾವಿಗೆ ಕಾರಣವಾದ ಅಂಶಗಳ ಬಗ್ಗೆ ತನಿಖೆ ನಡೆಸಲು ಮದ್ರಾಸ್ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇತೃತ್ವದ ತನಿಖಾ ಸಮಿತಿಯನ್ನು ರಚಿಸುವುದಾಗಿ ತಮಿಳುನಾಡು ಮುಖ್ಯಮಂತ್ರಿ ಇ.ಪಳನಿಸ್ವಾಮಿ ಘೋಷಿಸಿದ್ದಾರೆ.

      ನಿವೃತ್ತ ನ್ಯಾಯಾಧೀಶರ ಹೆಸರನ್ನು, ತನಿಖಾ ಸಮಿತಿಯ ಸ್ವರೂಪ, ಕಾರ್ಯಾವಧಿ ಇತ್ಯಾದಿಗಳ ಕುರಿತು ಶೀಘ್ರವೇ ಪ್ರಕಟಿಸಲಾಗುವುದು ಎಂದು ತರಾತುರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಪಳನಿಸ್ವಾಮಿ ಹೇಳಿದರು. ವಿವಿಧ ಮೂಲಗಳಿಂದ ಹಾಗೂ ಜನರಿಂದ ಬಂದಿರುವ ಮನವಿಯನ್ನು ಪರಿಗಣಿಸಿದ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ ಎಂದವರು ತಿಳಿಸಿದ್ದಾರೆ. ತಮಿಳುನಾಡಿನಲ್ಲಿ ಎಐಎಡಿಂಕೆಯ ಉಭಯ ಬಣಗಳ ವಿಲೀನಪ್ರಕ್ರಿಯೆ ಆರಂಭಿಸುವ ಮೊದಲು ಜಯಲಲಿತಾ ಸಾವಿನ ಬಗ್ಗೆ ತನಿಖೆಗೆ ಸರಕಾರ ಆದೇಶಿಸಬೇಕು ಎಂದು ಒ.ಪನ್ನೀರ್‌ಸೆಲ್ವಂ ಬಣ ಷರತ್ತು ವಿಧಿಸಿರುವುದನ್ನು ಇಲ್ಲಿ ಉಲ್ಲೇಖಿಸಬಹುದಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News