ರಸ್ತೆಗಳ ದುರಸ್ತಿಗೆ ದಸರಾ ಮಿತಿ ಕಾರ್ಯಾಧ್ಯಕ್ಷರ ಒತ್ತಾಯ

Update: 2017-08-17 18:19 GMT

ಮಡಿಕೇರಿ ಆ.17 : ನಗರದಲ್ಲಿ ಗೌರಿ ಗಣೇಶೋತ್ಸವ ಹಾಗೂ ನಾಡಹಬ್ಬ ದಸರಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಹದಗೆಟ್ಟ ರಸ್ತೆಗಳ ದುರಸ್ತಿಗೆ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನಗರ ದಸರಾ ಸಮಿತಿಯ ಕಾರ್ಯಾಧ್ಯಕ್ಷರಾದ ಮಹೇಶ್ ಜೈನಿ ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.

ಐತಿಹಾಸಿಕ ಮಡಿಕೇರಿ ದಸರಕ್ಕೆ ಕೇವಲ 1 ತಿಂಗಳು ಮಾತ್ರ ಬಾಕಿ ಇದೆ. ಈಗಾಗಲೇ ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಕೊಡಗಿನ ವಾತಾವರಣದ ಸವಿಯನ್ನು ಅನುಭವಿಸಲು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಮಳೆಗಾಲದಲ್ಲೂ ಹೆಚ್ಚಿನ ಉತ್ಸಾಹದಿಂದ ಪ್ರವಾಸಿಗರು ನಮ್ಮ ಜಿಲ್ಲೆಗೆ ಬಂದು ಪ್ರವಾಸಿ ತಾಣಗಳಲ್ಲಿ ದಿನಗಳನ್ನು ಕಳೆಯುತ್ತಿದ್ದಾರೆ. ಮಡಿಕೇರಿಯ ಜನತೆ ಕೂಡ ಮುಂದೆ ಬರುವ ಗೌರಿಗಣೇಶ ಹಾಗೂ ದಸರಾ ಆಚರಣೆಗೆ ಕಾತುರದಿಂದ ಕಾಯುತ್ತಿದ್ದಾರೆ.

ಆದರೆ ನಗರದ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು, ಜನತೆ ಓಡಾಡದಂತಹ ಪರಿಸ್ಥಿತಿ ಎದುರಾಗಿದೆ. ಮುಂದಿನವಾರ ನಗರದ ವಿವಿಧ ಬಡಾವಣೆಗಳಲ್ಲಿ ಪ್ರತಿಷ್ಠಾಪಿಸಲ್ಪಡುವ ಗೌರಿ ಗಣೇಶ ಮೂರ್ತಿಗಳ ವಿಸರ್ಜನೆ ಹಾಗೂ ಮುಂದಿನ ತಿಂಗಳು ದಶಮಂಟಪಗಳ ಶೋಭಾಯಾತ್ರೆ ನಡೆಯುವುದರಿಂದ ಪೋಲಿಸ್ ಇಲಾಖೆ ವಾಹನಗಳ ಮಾರ್ಗಗಳನ್ನು ಬದಾಲಾಯಿಸುವುದು ಸಹಜ. ನಗರದ ಎಲ್ಲಾ ಭಾಗಗಳಲ್ಲು ವಾಹನದಟ್ಟಣೆ ಹೆಚ್ಚಾಗಲಿದೆ. ಆದ್ದರಿಂದ ತೀವ್ರವಾಗಿ ಹದಗೆಟ್ಟಿರುವ ನಗರದ ರಸ್ತೆಗಳನ್ನು ಮರು ಡಾಂಬರೀಕರಣ ಗೊಳಿಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿರುವ ಮಹೇಶ್ ಜೈನಿ ಜಿಲ್ಲಾಡಳಿತ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News