ಅವಹೇಳನಕಾರಿ ಹೇಳಿಕೆ ಖಂಡಿಸಿ ಆ.19ರಂದು ಪ್ರತಿಭಟನೆ

Update: 2017-08-18 13:47 GMT

ಬೆಂಗಳೂರು, ಆ.18: ಇತ್ತೀಚಿಗೆ ಸುದ್ದಿ ವಾಹಿನಿಯೊಂದರ ಚರ್ಚೆಯಲ್ಲಿ ಭಾಗವಹಿಸಿದ್ದ ಬಿಜೆಪಿ ಮುಖಂಡ ತೇಜಸ್ವಿಸೂರ್ಯ ಡಾ.ಬಿ.ಆರ್.ಅಂಬೇಡ್ಕರ್‌ರನ್ನು ದೇಶದ್ರೋಹಿ ಎಂದು ಹೇಳಿಕೆ ನೀಡಿರುವುದನ್ನು ಖಂಡಿಸಿ ಆ.19ರಂದು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಅಂಬೇಡ್ಕರ್ ಸೇನೆಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೇನೆ ಉಪಾಧ್ಯಕ್ಷ ಕೋದಂಡರಾಮ್, ವಿಶ್ವದಾದ್ಯಂತ ಅಂಬೇಡ್ಕರ್‌ರನ್ನು ಜ್ಞಾನದ ಸಂಕೇತವಾಗಿ ಗುರುತಿಸುತ್ತಿರುವ ಈ ಸಂದರ್ಭದಲ್ಲಿ ಈ ಬಿಜೆಪಿ ಮುಖಂಡ ದೇಶದ್ರೋಹಿ ಎಂದು ಕರೆದಿದ್ದಾರೆ. ಈ ಮೂಲಕ ಅಂಬೇಡ್ಕರ್‌ರ ಚಾರಿತ್ರಿಕ ವಧೆ ಮಾಡಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.

ಅಂಬೇಡ್ಕರ್‌ರನ್ನು ಅವಮಾನಿಸಿದ ತೇಜಸ್ವಿ ಸೂರ್ಯನ ಮೇಲೆ ಎಸ್ಸಿ ಹಾಗೂ ಎಸ್ಟಿ ದೌರ್ಜನ್ಯ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ವಿವಿಧ ವಿಭಾಗಗಳಿಂದ 2 ಸಾವಿರಕ್ಕೂ ಅಧಿಕ ಜನರು ಭಾಗವಹಿಸುವ ನಿರೀಕ್ಷೆ ಇದೆ. ಈ ವೇಳೆ ತೇಜಸ್ವಿಯ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಲಾಗುತ್ತದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News