ಸಂಪುಟದಿಂದ ಸಚಿವರನ್ನು ಕೈಬಿಡಲು ಆಗ್ರಹಿಸಿ ಬಿಜೆಪಿ ಧರಣಿ
Update: 2017-08-18 20:29 IST
ಬೆಂಗಳೂರು, ಆ.18: ಆದಾಯ ತೆರಿಗೆ ಇಲಾಖೆಯಿಂದ ದಾಳಿಗೆ ಒಳಗಾಗಿರುವ ಸಚಿವರಾದ ಡಿ.ಕೆ.ಶಿವಕುಮಾರ್ ಹಾಗೂ ರಮೇಶ್ ಜಾರಕಿಹೊಳಿ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕೆಂದು ಆಗ್ರಹಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಹೊರಟ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರನ್ನು ಪೊಲೀಸರು ಬಂಧಿಸಿ, ಬಳಿಕ ಬಿಡುಗಡೆಗೊಳಿಸಿದರು.
ಈ ಇಬ್ಬರು ಸಚಿವರನ್ನು ಸಂಪುಟದಿಂದ ಕೈಬಿಡಬೇಕೆಂದು ಆಗ್ರಹಪಡಿಸಿ ಫ್ರೀಡಂ ಪಾರ್ಕ್‌ನಿಂದ ಆನಂದರಾವ್ ವೃತ್ತದ ಮೂಲಕ ವಿಧಾನಸೌಧಕ್ಕೆ ತೆರಳಲು ಹೊರಟ ಬಿಜೆಪಿ ಮುಖಂಡರನ್ನು ಪೊಲೀಸರು ಮಹಾತ್ಮಗಾಂಧಿ ಪ್ರತಿಮೆಯ ಮುಂಭಾಗ ತಡೆದು ಬಂಧಿಸಿದರು. ಪ್ರತಿಭಟನಾ ಮೆರವಣಿಗೆ ವೇಳೆ ಬಿಜೆಪಿ ಕಾರ್ಯಕರ್ತರು ಡಿ.ಕೆ.ಶಿವಕುಮಾರ್ ಹಾಗೂ ಜಾರಕಿಹೊಳಿ ಅವರ ವಿರುದ್ಧ ಕ್ರಮ ಕೈಗೊಂಡು ಸಚಿವ ಸಂಪುಟದಿಂದ ಕೆಬಿಡಬೇಕೆಂದು ಆಗ್ರಹಪಡಿಸಿದರು.