ಫಿಲಿಪ್ಪೀನ್ಸ್: ಮಾದಕ ದ್ರವ್ಯ ದಾಳಿ; 80 ಸಾವು

Update: 2017-08-18 15:01 GMT

ಮನಿಲಾ (ಫಿಲಿಪ್ಪೀನ್ಸ್), ಆ. 18: ಫಿಲಿಪ್ಪೀನ್ಸ್ ಅಧ್ಯಕ್ಷ ರಾಡ್ರಿಗೊ ಡುಟರ್ಟ್‌ರ ಮಾದಕ ದ್ರವ್ಯ ಮತ್ತು ಅಪರಾಧದ ವಿರುದ್ಧದ ಸಮರದ ಭಾಗವಾಗಿ ನಿರಂತರ ಮೂರನೆ ದಿನ ರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಪೊಲೀಸರು ಕನಿಷ್ಠ 13 ಮಂದಿಯನ್ನು ಕೊಂದಿದ್ದಾರೆ. ಇದರೊಂದಿಗೆ ಈ ವಾರ ನಡೆದ ಕಾರ್ಯಾಚರಣೆಯಲ್ಲಿ ಮೃತಪಟ್ಟವರ ಸಂಖ್ಯೆ 80ಕ್ಕೇರಿದೆ ಎಂದು ‘ರಾಯ್ಟರ್ಸ್’ ಪ್ರತ್ಯಕ್ಷದರ್ಶಿಗಳು ಮತ್ತು ಮಾಧ್ಯಮಗಳು ಶುಕ್ರವಾರ ವರದಿ ಮಾಡಿದ್ದಾರೆ.

ಈ ವಾರದ ಆರಂಭದಲ್ಲಿ ಮನಿಲಾ ಮತ್ತು ಅದರ ಸುತ್ತಮುತ್ತಲಿನ ಪ್ರಾಂತಗಳಲ್ಲಿ ನಡೆದ ಕಾರ್ಯಾಚರಣೆಗಳಲ್ಲಿ ಪೊಲೀಸರು 67 ಮಂದಿಯನ್ನು ಗುಂಡು ಹಾರಿಸಿ ಕೊಂದಿದ್ದಾರೆ ಹಾಗೂ 200ಕ್ಕೂ ಅಧಿಕ ಮಂದಿಯನ್ನು ಬಂಧಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News