ಖಾಸಗಿ ಬಸ್ ಢಿಕ್ಕಿ, ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
Update: 2017-08-18 20:32 IST
ಬೆಂಗಳೂರು, ಆ.18: ಖಾಸಗಿ ಬಸ್ ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕಲಬುರಗಿ ತಾಲೂಕಿನ ಫರಹತಾಬಾದ್ ಬಳಿ ನಡೆದಿದೆ.
ಮೃತರನ್ನು ಬಾಬುರಾವ್(45), ಅನಿತಾ(40) ಹಾಗೂ ಶುಭಂ(5) ಎಂದು ಗುರುತಿಸಲಾಗಿದೆ. ಬೀದರ್ ಜಿಲ್ಲೆಯ ಬಸವನ ಕಲ್ಯಾಣದಿಂದ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಘಣಿಗೆ ದಂಪತಿ ತನ್ನ ಮೊಮ್ಮಗ ಶುಭಂನನ್ನು ಬೈಕ್‌ನಲ್ಲಿ ಕರೆದುಕೊಂಡು ತೆರಳುತ್ತಿದ್ದಾಗ, ಕಲಬುರಗಿ ತಾಲೂಕಿನ ಫರಹತಾಬಾದ್ ಬಳಿ ಆರೆಂಜ್ ಟ್ರಾವೆಲ್ಸ್‌ಗೆ ಸೇರಿದ ಖಾಸಗಿ ಬಸ್ ಬೈಕಿಗೆ ಢಿಕ್ಕಿ ಹೊಡೆದಿದೆ.
ಢಿಕ್ಕಿ ಹೊಡೆದ ರಭಸಕ್ಕೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತ ಸಂಭವಿಸಿದ ಕೂಡಲೇ ಚಾಲಕ ಬಸ್ ಬಿಟ್ಟು ಪರಾರಿಯಾಗಿದ್ದಾನೆ. ಈ ಮೊಕದ್ದಮೆ ದಾಖಲಿಸಿಕೊಂಡಿರುವ ಫರಹತಾಬಾದ್ ಠಾಣಾ ಪೊಲೀಸರುಮುಂದಿನ ಕ್ರಮ ಕೈಗೊಂಡಿದ್ದಾರೆ.