ಮಂಡ್ಯ : ಸಚಿವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ
ಮಂಡ್ಯ, ಆ.18: ಅಕ್ರಮ ಆಸ್ತಿ ಆರೋಪ ಎದುರಿಸುತ್ತಿರುವ ಡಿ.ಕೆ.ಶಿವಕುಮಾರ್, ರಮೇಶ್ ಜಾರಕಿಹೋಳಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕ್‍ನ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಜಮಾವಣೆಗೊಂಡ ಕಾರ್ಯಕರ್ತರು, ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿದರು. ನಂತರ ಜಿಲ್ಲಾಧಿಕಾರಿ ಕಚೇರಿವರೆಗೆ ಮರೆವಣಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು.
ರಾಜ್ಯ ಸರಕಾರ ಭ್ರಷ್ಟರ ರಕ್ಷಣೆಗಾಗಿ ಲೋಕಾಯುಕ್ತವನ್ನು ದುರ್ಬಲಗೊಳಿಸಿ ಭ್ರಷ್ಟಾಚಾರ ನಿಗ್ರಹ ದಳವನ್ನು ಅಸ್ತಿತ್ವಕ್ಕೆ ತಂದಿದೆ. ಅನೇಕ ಸಚಿವರು ಅಕ್ರಮ ಆಸ್ತಿ ಗಳಿಕೆ ಮಾಡಿ ಸಿಕ್ಕಿ ಬಿದ್ದರೂ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಂಡಿಲ್ಲ, ಕೂಡಲೇ ಇದರ ಬಗ್ಗೆ ಗಮನಹರಿಸಬೇಕು ಎಂದು ಅವರು ಆಗ್ರಹಿಸಿದರು.
ರಾಜ್ಯ ಸರಕಾರದ ಮಂತ್ರಿಗಳು ಮಾಡಿರುವ ಬsÀ್ರಷ್ಟಾಚಾರವನ್ನು ಮುಚ್ಚಿಹಾಕುವ ಉದ್ದೇಶದಿಂದ ರಾಜ್ಯದ ಜನತೆಯ ಗಮನವನ್ನು ಬೇರೆಡೆಗೆ ತಿರುಗಿಸಲು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರ ಮನೆಯ ಮೇಲೆ ಐಟಿ ದಾಳಿ ನಡೆಸಲು ಮುಂದಾಗುತ್ತಿದೆ ಎಂದು ಮಾಜಿ ಸಂಸದೆ ತೇಜಶ್ವಿನಿ ಆರೋಪಿಸಿದರು.
ಪ್ರತಿಭಟನೆ ಪ್ರಾರಂಭವಾಗುತ್ತಿದ್ದಂತೆ ಒಂದು ಗುಂಪು ಮುಂದೆ ಮತ್ತೊಂದು ಗುಂಪು ಹಿಂದೆ ಹೋಗುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ಹಾಗು ಕೆಲವು ಕಾರ್ಯಕರ್ತರು ಇವರಲ್ಲಿ ಒಗ್ಗಟ್ಟೇ ಇಲ್ಲ. ಇದಕ್ಕೆ ಬಿಜೆಪಿ ಜಿಲ್ಲೆಯಲ್ಲಿ ನೆಲೆ ಕಾಣುತ್ತಿಲ್ಲ. ಕಾರ್ಯಕರ್ತರು ಒಗ್ಗೂಡಿ ಹೋರಾಟ ಮಾಡುವ ಪ್ರಯತ್ನ ಮಾಡುವುದನ್ನು ಬಿಟ್ಟು ಎರಡು ಮೂರು ಗುಂಪುಗಳಾಗಿ ಹೋಗಿ ಕಿತ್ತಾಡುತ್ತಿದ್ದಾರೆ ಎಂದು ಮಾತನಾಡಿಕೊಂಡಿದ್ದು ಕಂಡು ಬಂದಿತು.
ಕಿವಿಗೊಡದ ಕಾರ್ಯಕರ್ತರು:
ಅಕ್ರಮ ಆಸ್ತಿ ಸಂಪಾದಿಸಿರುವ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಮಾಜಿ ಸಂಸದೆ ತೇಜಶ್ವಿನಿ ರಮೇಶ್ ನೇತøತ್ವದಲ್ಲಿ ಕರೆಯಲಾಗಿದ್ದ ಪ್ರತಿಭಟನೆಗೆ ಬಿಜೆಪಿ ಕಾರ್ಯಕರ್ತರೇ ಹೆಚ್ಚು ಪಾಲ್ಗೊಂಡಿರಲಿಲ್ಲ.
ಮುಂದಿನ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಖಾತೆ ತೆರೆಯುವ ಉದ್ದೇಶದಿಂದ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ನೇತøತ್ವದಲ್ಲಿ ಅನೇಕ ಸಭೆಗಳು ನಡೆದರೂ ಸಹ ಶುಕ್ರವಾರ ನಡೆದ ಪ್ರತಿಭಟನೆಗೆ ಜಿಲ್ಲೆಯಾದ್ಯಂತ ಬೆರಳೆಣಿಕೆ ಮಂದಿ ಮಾತ್ರ ಪಾಲ್ಗೊಂಡಿದ್ದರು. ಇದೇ ರೀತಿ ಮುಂದುವರೆದರೆ ಬಿಜೆಪಿಯ ಪಾಡೇನು ಎಂಬ ಮಾತುಗಳು ಸಹ ಕೇಳಿ ಬಂದಿತು.
ಪಕ್ಷದ ಜಿಲ್ಲಾಧ್ಯಕ್ಷ ಕೆ.ನಾಗಣ್ಣಗೌಡ, ಯಮಂದೂರು ಸಿದ್ದರಾಜು, ನಗರ ಘಟಕ ಅಧ್ಯಕ್ಷ ಎಚ್.ಆರ್.ಅರವಿಂದ್, ಮಲ್ಲಿಕಾರ್ಜುನ, ಮಂಜುನಾಥ್, ಸಿದ್ದರಾಜುಗೌಡ, ಸಿ.ಟಿ.ಮಂಜುನಾಥ್, ಮದ್ದೂರು ಲಕ್ಷ್ಮಣ್, ಪ.ನಾ.ಸುರೇಶ್, ಟಿ.ಎಸ್.ವಿವೇಕ್, ಕೆ.ಜೆ.ವಿಜಯಕುಮಾರ್, ನಿತ್ಯಾನಂದ, ಇತರರು ಪಾಲ್ಗೊಂಡಿದ್ದರು.