ಮನೆ ಬೀಗ ಮುರಿದು ಚಿನ್ನಾಭರಣ, ನಗದು ದರೋಡೆ
Update: 2017-08-18 23:18 IST
ಬೆಂಗಳೂರು, ಆ.18: ಮನೆಯ ಬೀಗ ಮುರಿದ ಕಳ್ಳರು ಮನೆಯಲ್ಲಿದ್ದ 72 ಗ್ರಾಂ ಆಭರಣ ಹಾಗೂ 5 ಸಾವಿರ ದೋಚಿ ಪರಾರಿಯಾಗಿರುವ ಘಟನೆ ಸಂಜಯನಗರ ವ್ಯಾಪ್ತಿಯಲ್ಲಿ ನಡೆದಿದೆ.
ಸಂಜಯನಗರ ನಿವಾಸಿ ಹೇಮಂತ್ ಕುಟುಂಬದವರು ಶನಿವಾರ ಬೆಳಗ್ಗೆ 8ಗಂಟೆಗೆ ಹೊರಗೆ ಹೋಗಿದ್ದರು. ಈ ವೇಳೆ ಕಳ್ಳರು ಮನೆಯ ಬೀಗ ಮುರಿದು ಒಳ ನುಗ್ಗಿ ಬೀರುವನ್ನು ಒಡೆದು 72 ಗ್ರಾಂ ಆಭರಣ ಹಾೂ 5 ಸಾವಿರ ದೋಚಿ ಪರಾರಿಯಾಗಿದ್ದಾರೆ.
ಅದೇ ದಿನ ಮಧ್ಯಾಹ್ನ 3ಗಂಟೆಗೆ ಹೇಮಂತ್ ಕುಟುಂಬ ಮನೆಗೆ ವಾಪಸ್ ಆದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ, ತಕ್ಷಣ ಪೊಲೀಸರಿಗೆ ವಿಷಯ ತಿಳಿಸಿದ್ದು, ಸಂಜಯನಗರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.