ಹಳಿ ತಪ್ಪಿದ ಉತ್ಕಲ್ ಎಕ್ಸ್ ಪ್ರೆಸ್ ರೈಲು: ಹಲವರಿಗೆ ಗಾಯ

Update: 2017-08-19 13:10 GMT

ಹೊಸದಿಲ್ಲಿ, ಆ,19: ಪುರಿ-ಹರಿದ್ವಾರ್-ಕಳಿಂಗ ಉತ್ಕಲ್ ಎಕ್ಸ್ ಪ್ರೆಸ್ ನ 6 ಬೋಗಿಗಳು ಹಳಿತಪ್ಪಿದ ಘಟನೆ ಮುಝಫ್ಫರ್ ನಗರದ ಖಟೌಲಿಯಲ್ಲಿ ಶನಿವಾರ ಸಂಭವಿಸಿದೆ.

ಘಟನೆಯಿಂದ ಹಲವರು ಗಾಯಗೊಂಡಿದ್ದು,  ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಒಡಿಶಾದ ಪುರಿಯಿಂದ ಹರಿದ್ವಾರಕ್ಕೆ ರೈಲು ಆಗಮಿಸುತ್ತಿತ್ತು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಸ್ಥಳೀಯ ಅಧಿಕಾರಿಗಳು ದೌಡಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News