ಮೇಲ್ಮನೆ ಉಪ ಚುನಾವಣೆ: ಸಿ.ಎಂ. ಇಬ್ರಾಹೀಂ ಕಾಂಗ್ರೆಸ್ ಅಭ್ಯರ್ಥಿ
Update: 2017-08-19 19:42 IST
ಬೆಂಗಳೂರು, ಆ. 19: ವಿಮಲಗೌಡ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ವಿಧಾನ ಪರಿಷತ್ ಸ್ಥಾನಕ್ಕೆ ಇದೇ 31ಕ್ಕೆ ನಡೆಯಲಿರುವ ಉಪ ಚುನಾವಣೆಗೆ ಮಾಜಿ ಕೇಂದ್ರ ಸಚಿವ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯರ ಆಪ್ತ ಸಿ.ಎಂ. ಇಬ್ರಾಹೀಂ ಅವರನ್ನು ಅಭ್ಯರ್ಥಿಯನ್ನಾಗಿ ನಿಲ್ಲಿಸಲು ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ಸೂಚಿಸಿದ್ದು, ಎಐಸಿಸಿಯಿಂದ ಅಧಿಕೃತ ಪ್ರಕಟಣೆ ಹೊರಬಿದ್ದಿದೆ.