ಠಾಣಾಧಿಕಾರಿ ವರ್ಗಾವಣೆಗೆ ಒತ್ತಾಯಿಸಿ ದಸಂಸ ಪ್ರತಿಭಟನೆ

Update: 2017-08-19 14:54 GMT

ಮಡಿಕೇರಿ ಆ.19 : ದಲಿತ ವ್ಯಕ್ತಿಯೊಬ್ಬರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರಸಂತೆ ಠಾಣಾಧಿಕಾರಿ ಯಾವುದೇ ಕ್ರಮ ಕೈಗೊಳ್ಳದೆ ತಪ್ಪಿತಸ್ತರ ಪರ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕ ನಗರದಲ್ಲಿ ಪ್ರತಿಭಟನೆ ನಡೆಸಿತು.

 ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಪ್ರಮುಖರು, ಸಬ್ ಇನ್ ಸ್ಪೆಕ್ಟರ್ ತಕ್ಷಣ ವರ್ಗಾವಣೆ ಮಾಡಬೇಕೆಂದು ಒತ್ತಾಯಿಸಿದರು.  

 ಪ್ರಮುಖರಾದ ಶಿವಣ್ಣ ಮಾತನಾಡಿ ಶನಿವಾರಸಂತೆಯ ಪಕ್ಕದಲ್ಲಿರುವ ಬೆಳ್ಳರಳ್ಳಿಯಲ್ಲಿ ಇಬ್ಬರು ವ್ಯಕ್ತಿಗಳು ನನ್ನ ವಿರುದ್ಧ ಜಾತಿ ನಿಂದನೆ ಮಾಡಿದ್ದು, ಈ ಬಗ್ಗೆ 5 ಬಾರಿ ದೂರು ನೀಡಲಾಗಿದೆ. ಆದರೆ ಪೊಲೀಸ್ ಠಾಣಾಧಿಕಾರಿ ಇಬ್ಬರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಆರೋಪಿಸಿದರು.  ಮಾನಸಿಕ ಕಿರುಕುಳ ನೀಡುತ್ತಿರುವ ವ್ಯಕ್ತಿಗಳು ದೈಹಿಕವಾಗಿ ಹಿಂಸಿಸುವ ಆತಂಕ ಎದುರಾಗಿದೆ. ಆದ್ದರಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಇಬ್ಬರು ತಪ್ಪಿತಸ್ತರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ತಮ್ಮ ಕುಟುಂಬಕ್ಕೆ ಸೂಕ್ತ ರಕ್ಷಣೆಯನ್ನು ನೀಡಬೇಕೆಂದು ಒತ್ತಾಯಿಸಿದರು.

 ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕರಾದ ಎಂ.ಎಸ್.ವೀರೇಂದ್ರ ಮಾತನಾಡಿ ಠಾಣಾಧಿಕಾರಿಯನ್ನು ವರ್ಗಾವಣೆ ಮಾಡಿ ದಕ್ಷ ಅಧಿಕಾರಿಯನ್ನು ನೇಮಿಸಬೇಕೆಂದು ಶಿವಣ್ಣ ಒತ್ತಾಯಿಸಿದರು.

ರಾಜ್ಯ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕರಾದ ಜಗದೀಶ್, ನಿದೇರ್ಶಕರಾದ ಕಾಂತರಾಜ್ ಮತ್ತಿತರ ಪ್ರಮುಖರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಜಿಲ್ಲಾಡಳಿತಕ್ಕೆ ಮನವಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News