ರಾಜಕೀಯವಾಗಿ ಎಚ್‌ಡಿಕೆ ಮುಗಿಸಲು ಯತ್ನ: ಎಚ್.ಡಿ.ದೇವೇಗೌಡ

Update: 2017-08-19 15:42 GMT

ಬೆಳಗಾವಿ, ಆ.19: ರಾಜಕೀಯವಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯನ್ನು ಮುಗಿಸಲು ಕೆಲವರು ಪ್ರಯತ್ನಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಆರೋಪಿಸಿದ್ದಾರೆ.

ಶನಿವಾರ ನಗರದ ಕೆಂಪವಾಡ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಯನ್ನು ರಾಜಕೀಯವಾಗಿ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದರು. 

ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಒಂದೇ ವರ್ಗಕ್ಕೆ ಸೇರಿದವರು. ಈ ಮೂವರು ರಾಜ್ಯದ ಜನತೆಯ ದಿಕ್ಕು ತಪ್ಪಿಸುವಲ್ಲಿ ನಿಸ್ಸೀಮರಾಗಿದ್ದಾರೆ ಎಂದು ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದರು.

ಜೆಡಿಎಸ್‌ನ 7 ಬಂಡಾಯ ಶಾಸಕರ ಕ್ಷೇತ್ರದಲ್ಲೂ ಮುಂದಿನ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಬೇಕೆಂಬ ಶಪಥ ಮಾಡಿದ್ದೇನೆ. ಈ ಶಾಸಕರನ್ನು ಹೊರತುಪಡಿಸಿ ಬೇರೆ ಯಾವ ಶಾಸಕರು ಪಕ್ಷ ತೊರೆಯುವುದಿಲ್ಲ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News