×
Ad

ಬಹುಜನ ವಿಧ್ಯಾರ್ಥಿ ಸಂಘದಿಂದ ಪ್ರತಿಭಟನೆ

Update: 2017-08-19 21:53 IST

ಗುಂಡ್ಲುಪೇಟೆ, ಆ. 19: ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಬಸ್ ಪಾಸ್ ನೀಡಬೇಕು ಎಂದು ಒತ್ತಾಯಿಸಿ ಬಹುಜನ ವಿದ್ಯಾರ್ಥಿ ಸಂಘಟನೆಯ ವತಿಯಿಂದ ಪ್ರದರ್ಶನ ನಡೆಸಲಾಯಿತು.

ಬಿವಿಎಸ್ ಸಂಘಟನೆಯು ಪಟ್ಟಣದ ತಾಲೂಕು ಕಚೇರಿ ಎದುರು ಸಮಾವೇಶಗೊಂಡು ಪ್ರದರ್ಶನ ನಡೆಸಿದರು. ಗ್ರಾಮೀಣ ಪ್ರದೇಶಗಳಿಂದ ಶಾಲಾ ಕಾಲೇಜುಗಳಿಗೆ ಆಗಮಿಸುವ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಪಾಸ್ ನೀಡಬೇಕು ಎಂದು ಒತ್ತಾಯಿಸಿದ ಮನವಿ ಪತ್ರವನ್ನು ತಹಸೀಲ್ದಾರ್ ಕೆ.ಸಿದ್ದು ಅವರಿಗೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿವಿಎಸ್ ಸಂಘಟನೆಯ ಪದಾದಿಕಾರಿಗಳು ಹಾಗೂ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News