ಅನಧಿಕೃತ ಬ್ಯಾನರ್, ಪ್ಲೆಕ್ಸ್ ವಿರುದ್ಧ ಶಿಸ್ತು ಕ್ರಮ: ಎಸ್ಪಿ ಜಿ.ರಾಧಿಕಾರ ಎಚ್ಚರಿಕೆ
ಮಂಡ್ಯ, ಆ.19: ರಾಜ್ಯ, ರಾಷ್ಟ್ರೀಯ ಹೆದ್ದಾರಿ, ನಗರ, ಪಟ್ಟಣದ ಮುಖ್ಯ ಸ್ಥಳಗಳಲ್ಲಿ ಅನಧಿಕøತವಾಗಿ ಬ್ಯಾನರ್ ಹಾಕುವವರ ವಿರುದ್ಧ ಶಿಸ್ತು ಕ್ರಮ ಕೈಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ಎಚ್ಚರಿಸಿದ್ದಾರೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾನರ್, ಬಟಿಂಗ್ಸ್ ಹಾಗೂ ಫ್ಲೆಕ್ಸ್‍ಗಳನ್ನು ಅಳವಡಿಸಲು ಪೊಲೀಸ್ ಇಲಾಖೆ, ಸ್ಥಳೀಯ ಸಂಸ್ಥೆಗಳಿಂದ ಪರವಾನಗಿ ಪಡೆದುಕೊಳ್ಳುವುದು ಕಡ್ಡಾಯವಾಗಿದೆ ಎಂದರು.
ಸಂಚಾರ ದಟ್ಟಣೆ, ಬ್ಯಾನರ್ ಸಮಸ್ಯೆ, ಗಣೇಶ ಹಬ್ಬದ ಪ್ರಯುಕ್ತ ನಡೆಯುವ ಚಟವಟಿಕೆಗಳ ಸಂಪೂರ್ಣ ಮಾಹಿತಿಗಾಗಿ ನಗರದ ವಿವಿಧ ಭಾಗಗಳಲ್ಲಿ ಮತ್ತಷ್ಟು ಸಿಸಿ ಟಿವಿಯನ್ನು ಅಳವಡಿಸಲಾಗುವುದು ಎಂದು ಅವರು ಹೇಳಿದರು.
ನಗರದ ಹಾಗೂ ಪಟ್ಟಣದ ಪ್ರಮುಖ ಜಾಗಗಳಲ್ಲಿ ರಸ್ತೆ ದಟ್ಟಣೆ ಹಾಗೂ ಹೆದ್ದಾರಿಯಲ್ಲಿ ವಾಹನಗಳ ವೇಗ ಮಿತಿಯನ್ನು ನಿಯಂತ್ರಿಸಲು 140 ಬ್ಯಾರಿಕೇಡ್‍ಗಳನ್ನು ಖರೀದಿ ಮಾಡಲಾಗುತ್ತಿದೆ ಎಂದು ಅವರು ವಿವರಿಸಿದರು.
ಪೊಲೀಸ್ ಇಲಾಖೆ ಯಿಂದ ಯಾವುದೇ ರೀತಿಯ ತೊಂದರೆಯಾದರೆ, ಟ್ರಾಫಿಕ್ ಪೆÇಲೀಸರಿಂದ ಹಣವಸೂಲಿ, ಪ್ರಕರಣ ದಾಖ ಲಿಸಿಕೊಳ್ಳಲು ನಿರಾಕರಣೆ, ವಿರೋಧಿಗಳೊಂದಿಗೆ ಶಾಮೀಲಾದ ಪ್ರಕರಣಗಳು ಕಂಡು ಬಂದರೆ ತಕ್ಷಣವೇತನ್ನ ಗಮನಕ್ಕೆ ತರಬೇಕು ಎಂದು ಅವರು ಸಾರ್ವಜನಿಕರಿಗೆ ಮನವಿ ಮಾಡಿದರು.
ನಗರದ ಚಂದಗಾಲು ಲೇಔಟ್‍ನ ಗೌರಮ್ಮ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ತಂಡಗಳನ್ನು ರಚನೆ ಮಾಡಿ ತನಿಖೆಯನ್ನು ಪ್ರಾರಂಭಿಸಲಾಗಿದೆ. ಮಗಳು ನೀಡಿರುವ ದೂರಿನಲ್ಲಿ ಅವರ ತಂದೆಯನ್ನು ಆರೋಪಿಯನ್ನಾಗಿ ಮಾಡಲಾಗಿದೆ ಎಂದವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಗೌರಿ-ಗಣೇಶ ಹಬ್ಬಕ್ಕೆ ಅನುಮತಿ ಕಡ್ಡಾಯ:
ಗಣೇಶ ಪ್ರತಿಷ್ಠಾಪನೆಗೆ ಆಯಾ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಹಬ್ಬ ಆಚರಿಸಬೇಕು. ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರಾಧಿಕಾ ಎಚ್ಚರಿಸಿದರು.
ಹಬ್ಬ ಆಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಮುಂಜಾಗ್ರತ ಕ್ರಮ ಕೈಗೊಂಡಿದ್ದು, ರಸ್ತೆ, ಫುಟ್‍ಪಾತ್, ಸೇರಿದಂತೆ ಸಾರ್ವಜನಿಕರಿಗೆ ತೊಂದರೆಯಾಗುವ ಸ್ಥಳಗಳಲ್ಲಿ ಗಣೇಶ ಪ್ರತಿಷ್ಠಾಪನೆ ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದರು.