×
Ad

ನೈತಿಕ ಪೊಲೀಸ್‍ಗಿರಿ ವಿರುದ್ಧ ಹೋರಾಟಕ್ಕೆ ತಾಹೇರ್ ಕರೆ

Update: 2017-08-19 22:56 IST

ನಾಗಮಂಗಲ, ಆ.19: ಗೋರಕ್ಷಣೆ ಮತ್ತು ದೇಶಭಕ್ತಿ ಹೆಸರಿನಲ್ಲಿ ಬಿಜೆಪಿ ಮತ್ತು ಆರ್‍ಎಸ್‍ಎಸ್, ಸಂಘ ಪರಿವಾರದವರು  ದೇಶದಲ್ಲಿ ಅಲ್ಪಸಂಖ್ಯಾತರು ಹಾಗೂ  ದಲಿತರ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಎಸ್‍ಡಿಪಿಐ ಜಿಲ್ಲಾಧ್ಯಕ್ಷ ಮುಹಮ್ಮದ್ ತಾಹೇರ್ ಆರೋಪಿಸಿದ್ದಾರೆ.

ಪಟ್ಟಣದ ಬರ್ಕತ್ ಶಾದಿ ಮಹಲ್‍ನಲ್ಲಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಆಯೋಜಿಸಿದ್ದ ಭಾರತದ ಗುಂಪು ಹಿಂಸಾ ಹತ್ಯೆಯನ್ನು ಪ್ರತಿರೋದಿಸೋಣ ಎಂಬ ರಾಷ್ಟ್ರಿಯ ಅಭಿಯಾನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ದೇಶದಲ್ಲಿ ಸಾರ್ವಜನಿಕರ ಸ್ಥಳಗಳಲ್ಲಿ ಹೆಂಗಸರ ಮೇಲೆ ಅತ್ಯಾಚಾರ ದೌರ್ಜನ್ಯಗಳನ್ನ ನಡೆಸಿ ಅದನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಿಗೆ ಹರಿಯಬಿಟ್ಟು ಜನರಲ್ಲಿ ಭಯಬೀತ ವಾತಾವರಣ ಸೃಷ್ಟಿಸಲಾಗುತ್ತಿದೆ ಎಂದು ಅವರು ಕಿಡಿಕಾರಿದರು.

ಗೋಮಾಂಸ ಸೇವಿಸುತ್ತಾರೆಂಬ ಕಾರಣಕ್ಕೆ ಮುಸ್ಲಿಂ ಮತ್ತು ದಲಿತರನ್ನು ಗುರಿಯಾಗಿರಿಸಿಕೊಂಡು ಅವರ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಲಾಗುತ್ತಿದೆ. ನಕಲಿ ದೇಶಭಕ್ತರ, ಸಂಘಪರಿವಾರದವರ ನೈತಿಕ ಪೊಲೀಸ್ ಗಿರಿಯನ್ನು ಮಟ್ಟಹಾಕಲು ಸಂಘಟಿತ ಹೋರಾಟ ನಡೆಸಬೇಕು ಎಂದು ಅವರು ಕರೆ ನೀಡಿದರು.

ಎಸ್‍ಡಿಪಿಐ ಜಿಲ್ಲಾ ಸಮಿತಿ ಸದಸ್ಯ ಮುಹಮ್ಮದ್,  ಮೊಕ್ತಿಯಾರ್,  ಮುಜಾಹಿದ್ ಪಾಷ,  ವಕೀಲ ಬೆಳ್ಳೂರು ತಾಸಿರ್, ತಾಲೂಕು ಸಮಿತಿಯ ರಿಹಾನ್, ಅಹ್ಮದ್ ಮನ್ಸೂರ್, ಇತರ ಮುಖಂಡರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News