×
Ad

ಕೊಯಿಲ: ರಸ್ತೆ ಅಪಘಾತ; ಆರು ಮಂದಿಗೆ ಗಾಯ

Update: 2017-08-20 17:38 IST

ಕೊಯಿಲ, ಆ.20: ಉಪ್ಪಿನಂಗಡಿ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೊಯಿಲ ಫಾರಂ ಬಳಿ ಜೀಪು ಹಾಗೂ ಸ್ವಿಫ್ಟ್ ಕಾರು ನಡುವೆ ಅಪಘಾತ ಸಂಭವಿಸಿ ಆರು ಮಂದಿ ಗಾಯಗೊಂಡ ಘಟನೆ ರವಿವಾರ ಸಂಜೆ ನಡೆದಿದೆ.

ಅಪಘಾತದಲ್ಲಿ ಎರಡೂ ವಾಹನಗಳಲ್ಲಿದ್ದ ಆರು ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಅಪಘಾತದ‌ ರಭಸಕ್ಕೆ ಜೀಪು ಪಲ್ಟಿಯಾಗಿದ್ದು, ರಸ್ತೆಗೆ ಅಡ್ಡವಾಗಿ ಬಿದ್ದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News